ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ದಸರಾ ಸಂಭ್ರಮದ ಜತೆಗೆ ಸುರಕ್ಷತೆಗೂ ನಿಗಾವಹಿಸಿ : ಸೆಸ್ಕ್‌ ಮನವಿ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್‌ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಾಕರ್ಷಕ ವಿದ್ಯುತ್‌ ದೀಪಾಲಂಕಾರ ಮಾಡಲಾಗುತ್ತಿದೆ. ನಗರದ ಸೌಂದರ್ಯ ಹೆಚ್ಚಿಸುವ ಹಾಗೂ ದಸರೆಯ ಸಂಭ್ರಮ, ಸಡಗರವನ್ನು ಇಮ್ಮಡಿಗೊಳಿಸುವ ವಿದ್ಯುತ್‌ ದೀಪಾಲಂಕಾರ ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದ ಕಣ್ತುಂಬಿಕೊಳ್ಳುವ ಸಂದರ್ಭದಲ್ಲಿ ಸುರಕ್ಷತೆಗೂ ಆದ್ಯತೆ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದೆ.

ಇದನ್ನು ಓದಿ: ನಾಳೆಯಿಂದ ದಸರಾ ಯುವ ಸಂಭ್ರಮ: ರಾಜ್ಯದ ವಿವಿಧ ಕಾಲೇಜಿನ ತಂಡಗಳು ಭಾಗಿ

ವಿದ್ಯುತ್‌ ಗ್ರಾಹಕರು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುತ್ತಿರುವ ಸೆಸ್ಕ್‌ ವತಿಯಿಂದಲೂ ಸಾಕಷ್ಟು ಸುರಕ್ಷತಾ ಕ್ರಮ ಕೈಗೊಂಡು ದಸರಾ ದೀಪಾಲಂಕಾರ ಮಾಡಲಾಗಿದೆ. ಆದರೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾವಹಿಸುವುದು ಸಾರ್ವಜನಿಕರ ಕರ್ತವ್ಯವಾಗಿದೆ. ಇದಕ್ಕಾಗಿ ನಿಗಮದ ವತಿಯಿಂದ ಸಾರ್ವಜನಿಕರ ಸುರಕ್ಷತೆ ಕೆಲವು ಸಲಹೆಗಳನ್ನು ನೀಡಲಾಗಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ದಸರಾ ದೀಪಾಲಂಕಾರದ ಸಂಭ್ರಮವನ್ನು ನಿರಾತಂಕವಾಗಿ ಆನಂದಿಸುವಂತೆ ಸೆಸ್ಕ್‌ ಪ್ರಕಟಣೆಯಲ್ಲಿ ಕೋರಿದೆ.

ಸುರಕ್ಷತಾ ಸಲಹೆಗಳು
• ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳಿ.

• ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್‌ ಮಾಡುವುದನ್ನು ತಪ್ಪಿಸಿ.

• ಮಳೆ ಸಂದರ್ಭದಲ್ಲಿ ವಿದ್ಯುತ್‌/ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸಿ.

• ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ಕೆಲವು ಕಡೆಗಳಲ್ಲಿ ದೀಪಾಲಂಕಾರದ ಪ್ರತಿಕೃತಿಗಳನ್ನು ಇರಿಸಲಾಗಿದೆ. ಆದ್ದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಇವುಗಳನ್ನು ಗಮನಿಸಿ ಸುರಕ್ಷಿತವಾಗಿ ಸಂಚರಿಸಲು ಕೋರಲಾಗಿದೆ.

• ವಿದ್ಯುತ್‌ ಸಂಬಂಧಿತ ದೂರು/ದೀಪಾಲಂಕಾರದಿಂದ ತೊಂದರೆ ಆದಲ್ಲಿ 24×7 ಸಹಾಯವಾಣಿ 1912 ಸಂಪರ್ಕಿಸಿ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

3 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

3 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

3 hours ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

3 hours ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

3 hours ago