ನಮ್ಮ ಮೈಸೂರ ದಸರಾ 2025

Mysuru Dasara | ಗಾಯಕ ಶ್ರೀಹರ್ಷ ಭಾವಗೀತೆಗೆ ತಲೆದೂಗಿದ ಪ್ರೇಕ್ಷಕರು

ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆಯಲ್ಲಿ ಮೈಸೂರಿನ ಶ್ರೀಹರ್ಷ ಹಾಗೂ ರಶ್ಮಿ ಚಿಕ್ಕಮಗಳೂರು ಅವರು ಭಾವಗೀತೆಗಳ ಗಾನಸುಧೆಯ ಮೂಲಕ ನಗರದ ಅಂಬಾವಿಲಾಸ ಅರಮನೆ ಆವರಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆಯಲ್ಲಿ ಪ್ರೇಕ್ಷಕರ ಮನತಣಿಸಿದರು.

ಗಾಯಕ ಶ್ರೀ ಹರ್ಷ ಮೈಸೂರು ರಾಜ ಮನೆತನದ ಗೀತೆ ಕಾಯೋ ಶ್ರೀ ಗೌರಿ ಗಾಯನದ ಮೂಲಕ ಪ್ರಾರಂಭಿಸಿ ರಾಷ್ಟ್ರ ಕವಿ ಕುವೆಂಪುರವರ ಬಾ ಇಲ್ಲಿ ಸಂಭವಿಸು ನಿತ್ಯಾವತಾರ, ಎಲ್ಲಿ ಜಾರಿತು ಮನವೂ ಎಲ್ಲೆ ಮೀರಿತು, ನಿಸ್ಸಾರ್ ಅಹಮದ್ ಅವರ ನಿತ್ಯೋತ್ಸವ ತಾಯಿ ನಿತ್ಯೋತ್ಸವ, ಕುರಿಗಳು ಸರ್ ಕುರಿಗಳು, ನರಸಿಂಹ ಸ್ವಾಮಿ ಅವರ ದೀಪವು ನಿನ್ನದೇ ಗಾಳಿಯೂ ನಿನ್ನದೇ, ಜಿ ಪಿ ರಾಜರತ್ನಂ ಹೆಂಡ ಹೆಂಡ್ತಿ ಕನ್ನಡ ಪದದೂಲ್‌ಅವರ ಹೀಗೆ ಹಲವು ಕನ್ನಡ ಸಾಹಿತ್ಯ ಲೋಕದ ಖ್ಯಾತ ಕವಿಗಳ ಭಾವಗೀತೆಗಳನ್ನು ಹಾಡಿ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸಿದರು.

ಇದಕ್ಕೂ ಮುನ್ನ ಡಾ.ಮೋಹಿಸಿನ್ ಖಾನ್ ಮತ್ತು ತಂಡದಿಂದ ಸಿತಾರ್ ವಾದನ ನಡೆಯಿತು ಹಾಗೂ ಮೈಸೂರಿನ ವಿದ್ವಾನ್ ರಘು ನಂದನ್ ಹಾಗೂ ಸುಮುಖ ತಂಡದಿಂದ ಕರ್ನಾಟಕ ಶಾಸ್ತ್ರಿಯ ಸಂಗೀತದ ಮೂಲಕ ಪ್ರೇಕ್ಷಕರನ್ನು ತಲೆದೂಗುವಂತೆ ಮಾಡಿದರು.

ಇದನ್ನೂ ಓದಿ:-Mysuru Dasara | ದಸರಾಗೆ ಮತ್ತಷ್ಟು ಮೆರಗು ತಂದ ಏರ್‌ ಶೋ ; ಸಾಹಸಮಯ ಪ್ರದರ್ಶನ

ಇದೇ ವೇಳೆ ಅರಮನೆ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸಂಪತ್ ಕೃಷ್ಣ ಅಯ್ಯಂಗಾರ್ ದಂಪತಿಗಳಿಗೆ ಸಾಂಸ್ಕ ತಿಕ ಕಾರ್ಯಕ್ರಮ ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ಅವರು, ವಿಧಾನಪರಿಷತ್ ಸದಸ್ಯರಾದ ಶಿವಕುಮಾರ್ ಹಾಗೂ ಉಪ ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತಿದ್ದರು.

ರಂಜಿಸಿದ ಶಿವತಾಂಡವ ವೈಭವ ಬಳಿಕ ಮೈಸೂರಿನ ಹೆಸರಾಂತ ಭರತನಾಟ್ಯ ಕಲಾವಿದ ಶ್ರೀಧರ್ ಜೈನ್ ತಂಡದಿಂದ ಶಿವ ತಾಂಡವ ನೃತ್ಯ ಮಾಡಲಾಯಿತು. ಅವರ ನೃತ್ಯಕ್ಕೆ ಇಡೀ ಪ್ರೇಕ್ಷಕರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಅಭಿನಂದಿಸಿದರು.

ಆಂದೋಲನ ಡೆಸ್ಕ್

Recent Posts

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

7 mins ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

23 mins ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

43 mins ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

2 hours ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

2 hours ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

3 hours ago