Mysore
15
clear sky

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಮೈಸೂರು ದಸರಾ: ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌1ರವರೆಗೆ ಪುಸ್ತಕ ಮೇಳ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಸೆಪ್ಟೆಂಬರ್.‌22ರಿಂದ ಅಕ್ಟೋಬರ್‌.1ರವರೆಗೆ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಅವರು, ನಗರದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಮೈದಾನದಲ್ಲಿ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಈ ಬಾರಿ ಹಿಂದೆಂದಿಗಿಂತಲೂ ವಿಭಿನ್ನವಾಗಿ ಪುಸ್ತಕ ಪ್ರದರ್ಶನವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್.‌22ರಂದು ಸಂಜೆ 5 ಗಂಟೆಗೆ ಸಚಿವ ಶಿವರಾಜ್‌ ತಂಗಡಗಿ ಅವರು ಪುಸ್ತಕ ಮೇಳ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

Tags:
error: Content is protected !!