ನಮ್ಮ ಮೈಸೂರ ದಸರಾ 2025

Mysuru dasara | ದಸರಾ ಕುಸ್ತಿ ಪಂದ್ಯಾವಳಿಗೆ ಸಿಎಂ ಚಾಲನೆ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಸ್ತಿಪಟುಗಳಿಗೆ ಬೆನ್ನು ತಟ್ಟುವ ಮೂಲಕ ಚಾಲನೆ ನೀಡಿದರು.

ನಗರದ ಕರ್ನಾಟಕ ವಸ್ತು ಪ್ರದರ್ಶನದ ಪ್ರಾಧಿಕಾರ ಆವರಣ ಡಿ.ದೇವರಾಜು ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಿರುವ ದಸರಾ ಕುಸ್ತಿ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀಕ್ಷಿಸಿ ಕುಸ್ತಿ ಪಟುಗಳಿಗೆ ಪ್ರೋತ್ಸಾಹ ನೀಡಿದರು.

ಮೈಸೂರಿನ ಮಹದೇಪುರ ಪೈಲ್ವಾನ್ ವಿಕಾಸ್ ಹಾಗೂ ದಾವಣಗೆರೆ ಕ್ರೀಡಾನಿಲಯದ ಪೈಲ್ವಾನ್ ಕಿರಣ್ ನಡುವೆ ನಡೆದ 30 ನಿಮಿಷದ ಮೊದಲ ಕುಸ್ತಿಯು ಪೈಪೋಟಿಯಿಂದ ನಡೆಯಿತು. ಅಂತಿಮವಾಗಿ 22 ನಿಮಿಷದಲ್ಲಿ ಪೈಲ್ವಾನ್ ವಿಕಾಸ್ ಜಯಶೀಲರಾದರು.

ಇದನ್ನು ಓದಿ : ಮೈಸೂರು ದಸರಾ ಮಹೋತ್ಸವ: ಆಹಾರ ಮೇಳ ಉದ್ಘಾಟನೆ

ಮಹಿಳಾ ಕುಸ್ತಿ ಪಟುಗಳಾದ ಬೆಂಗಳೂರಿನ ಪುಷ್ಪ ಹಾಗೂ ಬೆಳಗಾವಿಯ ನಂದಿನಿ ನಡುವೆ ನಡೆದ ಕುಸ್ತಿಯಲ್ಲಿ 1 ನಿಮಿಷ 10 ಸೆಕೆಂಡ್ ನಲ್ಲಿ ನಂದಿನಿ ಜಯಗಳಿಸಿದರು. ಅಥಣಿಯ ಪೈಲ್ವಾನ್ ಸುರೇಶ್ ಲಂಕೋಟಿ ಹಾಗೂ ದಾವಣಗೆರೆ ಕ್ರೀಡಾ ನಿಲಯದ ಪೈಲ್ವಾನ್ ಹನುಮಂಥ ವಿಠಲ ಬೇವಿನ ಮರ ನಡುವೆ ಕುಸ್ತಿ ರೋಚಕತೆಯಿಂದ ಕೂಡಿತ್ತು.

ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಚಾಮರಾಜ ನಗರ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ರವಿಶಂಕರ್ ಡಿ, ಶ್ರೀವತ್ಸ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಗ್ಯಾರೆಂಟಿ ಯೋಜನೆ ರಾಜ್ಯ ಉಪಾಧ್ಯಕ್ಷರಾದ ಡಾ.ಪುಷ್ಪಾವತಿ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ಇತರರು ಇದ್ದರು

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

7 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

7 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago