ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಸ್ತಿಪಟುಗಳಿಗೆ ಬೆನ್ನು ತಟ್ಟುವ ಮೂಲಕ ಚಾಲನೆ ನೀಡಿದರು.
ನಗರದ ಕರ್ನಾಟಕ ವಸ್ತು ಪ್ರದರ್ಶನದ ಪ್ರಾಧಿಕಾರ ಆವರಣ ಡಿ.ದೇವರಾಜು ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಿರುವ ದಸರಾ ಕುಸ್ತಿ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀಕ್ಷಿಸಿ ಕುಸ್ತಿ ಪಟುಗಳಿಗೆ ಪ್ರೋತ್ಸಾಹ ನೀಡಿದರು.
ಮೈಸೂರಿನ ಮಹದೇಪುರ ಪೈಲ್ವಾನ್ ವಿಕಾಸ್ ಹಾಗೂ ದಾವಣಗೆರೆ ಕ್ರೀಡಾನಿಲಯದ ಪೈಲ್ವಾನ್ ಕಿರಣ್ ನಡುವೆ ನಡೆದ 30 ನಿಮಿಷದ ಮೊದಲ ಕುಸ್ತಿಯು ಪೈಪೋಟಿಯಿಂದ ನಡೆಯಿತು. ಅಂತಿಮವಾಗಿ 22 ನಿಮಿಷದಲ್ಲಿ ಪೈಲ್ವಾನ್ ವಿಕಾಸ್ ಜಯಶೀಲರಾದರು.
ಇದನ್ನು ಓದಿ : ಮೈಸೂರು ದಸರಾ ಮಹೋತ್ಸವ: ಆಹಾರ ಮೇಳ ಉದ್ಘಾಟನೆ
ಮಹಿಳಾ ಕುಸ್ತಿ ಪಟುಗಳಾದ ಬೆಂಗಳೂರಿನ ಪುಷ್ಪ ಹಾಗೂ ಬೆಳಗಾವಿಯ ನಂದಿನಿ ನಡುವೆ ನಡೆದ ಕುಸ್ತಿಯಲ್ಲಿ 1 ನಿಮಿಷ 10 ಸೆಕೆಂಡ್ ನಲ್ಲಿ ನಂದಿನಿ ಜಯಗಳಿಸಿದರು. ಅಥಣಿಯ ಪೈಲ್ವಾನ್ ಸುರೇಶ್ ಲಂಕೋಟಿ ಹಾಗೂ ದಾವಣಗೆರೆ ಕ್ರೀಡಾ ನಿಲಯದ ಪೈಲ್ವಾನ್ ಹನುಮಂಥ ವಿಠಲ ಬೇವಿನ ಮರ ನಡುವೆ ಕುಸ್ತಿ ರೋಚಕತೆಯಿಂದ ಕೂಡಿತ್ತು.
ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಚಾಮರಾಜ ನಗರ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ರವಿಶಂಕರ್ ಡಿ, ಶ್ರೀವತ್ಸ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಗ್ಯಾರೆಂಟಿ ಯೋಜನೆ ರಾಜ್ಯ ಉಪಾಧ್ಯಕ್ಷರಾದ ಡಾ.ಪುಷ್ಪಾವತಿ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ಇತರರು ಇದ್ದರು
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…