ನಮ್ಮ ಮೈಸೂರ ದಸರಾ 2025

Mysuru dasara | ದಸರಾ ಆನೆಗಳಿಗೆ ಕಮಾಂಡೋ ಕಾವಲು

ಮೈಸೂರು : ವನ್ಯಜೀವಿ -ಮಾನವ ಸಂಘರ್ಷ ನಿಯಂತ್ರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ ಹೊತ್ತ ಮಾವುತರು ಮತ್ತು ಕಾವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ಭೋಜನ ಬಡಿಸುದ ಬಳಿಕ ಮಾತನಾಡಿದ ಅವರು, ಆನೆ ಪಳಗಿಸುವ ಕಲೆಯನ್ನು ವಂಶಪಾರಂಪರ್ಯವಾಗಿ ಕರಗತ ಮಾಡಿಕೊಂಡಿರುವ ಮಾವುತರು ಹಾಗೂ ಕಾವಾಡಿಗಳು ಪುಂಡಾನೆ, ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದರು.

ಇದನ್ನು ಓದಿ :  ವಿಜಯದಶಮಿ ಜಂಬೂಸವಾರಿಗೆ ನಾಲ್ಕು ದಿನ ಬಾಕಿ: ಅರಮನೆ ಆವರಣದಲ್ಲಿ ಭರದ ಸಿದ್ಧತೆ

ಇಡೀ ದೇಶದಲ್ಲಿಯೇ ಆನೆಗಳನ್ನು ಪಳಗಿಸುವಲ್ಲಿ ಕರ್ನಾಟಕದ ಮಾವುತ ಮತ್ತು ಕಾವಾಡಿಗಳಿಗೆ ವಿಶೇಷ ಕೌಶಲ್ಯವಿದೆ ಹೀಗಾಗಿಯೇ ನೆರೆಯ ಆಂಧ್ರಪ್ರದೇಶ, ಗೋವಾ ಮೊದಲಾದ ರಾಜ್ಯಗಳು ಸಹ ಕುಮ್ಕಿ ಆನೆಯ ಸಹಾಯಕ್ಕೆ ರಾಜ್ಯಕ್ಕೆ ಮನವಿ ಮಾಡುತ್ತವೆ ಎಂದರು.

ಮಾವುತರು ಮತ್ತು ಕಾವಾಡಿಗಳಿಗೆ ಆನೆಗಳನ್ನು ಸೆರೆ ಹಿಡಿಯುವ ಮತ್ತು ಪಳಗಿಸುವ, ನಿಯಂತ್ರಿಸುವ, ಪಾಲನೆ ಹಾಗೂ ಪೋಷಣೆ ಮಾಡುವ ಕಲೆ ರಕ್ತಗತವಾಗಿ ಬಂದಿದೆ. ಈ ಕಲೆಯನ್ನು ಪಠ್ಯ ಪುಸ್ತಕದಿಂದ ಅಥವಾ ಶಾಲಾ-ಕಾಲೇಜಿನಲ್ಲಿ ಕಲಿ ಸಲುಸಾಧ್ಯವಿಲ್ಲ ಎಂದ ಈಶ್ವರ ಖಂಡ್ರೆ, ನಮ್ಮ ರಾಜ್ಯದ ಮಾವುತರು ಹಾಗೂ ಕಾವಾಡಿಗಳಿಗೆ ವಂಶಪಾರಂಪರ್ಯವಾಗಿ ಕೌಶಲ್ಯವಿದ್ದರೂ, ಅವರಿಗೆ ತಜ್ಞರಿಂದ ವೃತ್ತಿ ತರಬೇತಿಯನ್ನೂ ಕೊಡಿಸಲಾಗುತ್ತಿದ್ದು, ಇದು ಅವರ ನೈಪುಣ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ ಎಂದರು.

ಮಾವುತರು, ಕಾವಾಡಿಗಳ ನ್ಯಾಯಯುತ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

2 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

6 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

6 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

6 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

6 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

7 hours ago