ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ಅರಮನೆ ಸುತ್ತ ಸ್ಥಳಪರಿಶೀಲಿಸಿದ ಆಯುಕ್ತರು

ಮೈಸೂರು : ಅರಮನೆ ಆವರಣದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮ, ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸುರಕ್ಷತೆ, ಭದ್ರತೆ ಕುರಿತು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪರಿಶೀಲಿಸಿದರು.

ಅರಮನೆ, ಚಾಮರಾಜ ಒಡೆಯರ್ ವೃತ್ತ, ಕೆ.ಆರ್.ವೃತ್ತ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಜಂಬೂ ಸವಾರಿ ಮೆರವಣಿಗೆ, ಅರಮನೆ ಆವರಣದಲ್ಲಿ ಜರುಗುವ ವಿವಿಧ ಸಾಂಸ್ಕ ತಿಕ ಕಾರ್ಯಕ್ರಮಗಳಿಗೆ ಸಾರ್ವಜನಿಕರು, ಪ್ರೇಕ್ಷಕರು – ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸುರಕ್ಷತೆ – ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಅರಮನೆಯ ಸುತ್ತಮುತ್ತ ಮತ್ತು ಅರಮನೆಯ ಆವರಣದಲ್ಲಿ ಸ್ಥಳಗಳ ಪರಿಶೀಲನೆ ನಡೆಸಿ ಬಂದೋಬಸ್ತ್‌ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಡಿಸಿಪಿಗಳಾದ ಆರ್.ಎನ್.ಬಿಂದುಮಣಿ, ಕೆ.ಎಸ್. ಸುಂದರರಾಜ್ ಈ ಸಂದರ್ಭದಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

54 seconds ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

19 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

30 mins ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

55 mins ago

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

1 hour ago

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…

1 hour ago