ಮೈಸೂರು : ಅರಮನೆ ಆವರಣದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮ, ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸುರಕ್ಷತೆ, ಭದ್ರತೆ ಕುರಿತು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪರಿಶೀಲಿಸಿದರು.
ಅರಮನೆ, ಚಾಮರಾಜ ಒಡೆಯರ್ ವೃತ್ತ, ಕೆ.ಆರ್.ವೃತ್ತ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಜಂಬೂ ಸವಾರಿ ಮೆರವಣಿಗೆ, ಅರಮನೆ ಆವರಣದಲ್ಲಿ ಜರುಗುವ ವಿವಿಧ ಸಾಂಸ್ಕ ತಿಕ ಕಾರ್ಯಕ್ರಮಗಳಿಗೆ ಸಾರ್ವಜನಿಕರು, ಪ್ರೇಕ್ಷಕರು – ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸುರಕ್ಷತೆ – ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಅರಮನೆಯ ಸುತ್ತಮುತ್ತ ಮತ್ತು ಅರಮನೆಯ ಆವರಣದಲ್ಲಿ ಸ್ಥಳಗಳ ಪರಿಶೀಲನೆ ನಡೆಸಿ ಬಂದೋಬಸ್ತ್‌ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಡಿಸಿಪಿಗಳಾದ ಆರ್.ಎನ್.ಬಿಂದುಮಣಿ, ಕೆ.ಎಸ್. ಸುಂದರರಾಜ್ ಈ ಸಂದರ್ಭದಲ್ಲಿ ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…