ನಮ್ಮ ಮೈಸೂರ ದಸರಾ 2025

Mysuru Dasara | ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ

ಮೈಸೂರು : ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಇದರಂತೆ ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ ಆಸನ ಸಾಮರ್ಥ್ಯವನ್ನು 65,000 ರಿಂದ 40,000 ಕ್ಕೆ ಇಳಿಕೆ ಮಾಡಲು ನಿರ್ಧರಿಸಿದೆ.

ಈ ವರ್ಷ ಕನಿಷ್ಠ 25,000 ಆಸನಗಳನ್ನು ಕಡಿಮೆ ಮಾಡಲಾಗುವುದು. ದೊಡ್ಡ ಸಭೆಗಳನ್ನು ನಿರ್ವಹಿಸುವ ಬಗ್ಗೆ ಹೆಚ್ಚು ಜಾಗರೂಕರಾಗಿರಲು ಪಾಸ್‍ಗಳನ್ನೂ ಕೂಡ ಕಡಿಮೆ ಮುದ್ರಿಸಲಾಗಿದೆ.

ಮೈಸೂರು ಜಿಲ್ಲಾ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಅಧಿಕಾರಿಗಳ ಮತ್ತು ದಸರಾ ಉಪಸಮಿತಿಯ ಸಭೆ ನಡೆಸಿ, ದಸರಾ ಹಬ್ಬ ಮತ್ತು ಸುರಕ್ಷಿತಾಕ್ರಮ ಅಗತ್ಯ ಕುರಿತು ಸೂಚನೆಗಳನ್ನು ನೀಡಿದ್ದಾರೆ.ಕಳೆದ ವರ್ಷ ಸುಮಾರು 60,000 ಇದ್ದ ಆಸನ ವ್ಯವಸ್ಥೆಯನ್ನು ಈ ವರ್ಷ 45,000 ಅಥವಾ ಅದಕ್ಕಿಂತ ಕಡಿಮೆಗೆ ಇಳಿಸಲಾಗುವುದು.

ಇದನ್ನು ಓದಿ: ಬೌದ್ಧರುದ್ಯಾನ ಪದ ಸೇರಿಸಿ ನಾಡಗೀತೆ ಪೂರ್ಣಗೊಳಿಸಿ : ಪ್ರೊ.ಅರವಿಂದ ಮಾಲಗತ್ತಿ

ವಿಜಯದಶಮಿ ದಿನದಂದು ನಡೆಯುವ ದಸರಾ ಜಂಬೂ ಸವಾರಿಗೆ ಅತೀ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಹೊತ್ತೊಯ್ಯುವ ಆನೆಯನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ. ಪ್ರತಿ ವರ್ಷ ಪಾಸ್‍ಗಳ ಅವ್ಯವಸ್ಥೆ, ಸಾಮಥ್ರ್ಯಕ್ಕಿಂತ ಹೆಚ್ಚಿನ ಪಾಸ್‍ಗಳನ್ನು ಮುದ್ರಿಸಲಾಗುತ್ತಿದೆ, ಲಾಬಿ ನಡೆಸಲಾಗುತ್ತದೆ ಎಂಬ ದೂರುಗಳು ಕೇಳಿಬರುವ ಹಿನ್ನೆಲೆಯಲ್ಲಿ ವರ್ಷ ಉಪಸಮಿತಿಯು ಆಸನ ಲಭ್ಯತೆ ಇರುವಷ್ಟು ಮಾತ್ರ ಮುದ್ರಿಸಲು ನಿರ್ಧರಿಸಿದೆ.

ಏತನ್ಮಧ್ಯೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗ ಮದ್ಯೆ ಖಾಕಿ ಸರ್ಪಗಾವಲು ಹಾಕಲಾಗಿದೆ.

ಇದನ್ನು ಓದಿ: ಚಾಮುಂಡಿಬೆಟ್ಟದ ಶಿವಾರ್ಚಕ ವಿಧಿವಶ: ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

ವಿಐಪಿ ಹಾಗೂ ವಿವಿಐಪಿ ಸಂಚಾರ ಇರುವ ಕಾರಣ ಬೈಕ್ ಗಳನ್ನೂ ಬಿಡುತ್ತಿಲ್ಲ. ಓರ್ವ ಡಿಸಿಪಿ, ಇಬ್ಬರು ಎಸಿಪಿ ಸಂಚಾರಿ ಪೊಲೀಸರು ಸೇರಿದಂತೆ ಕೆ.ಎಸ್.ಆರ್.ಪಿ ಹಾಗೂ ಡಿ.ಆರ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ನಿಯೋಜನೆ ಮಾಡಲಾಗಿದೆ.

ಹಬ್ಬದ ಸಮಯದಲ್ಲಿ ಎಲ್ಲಾ ಪಾರಂಪರಿಕ ಕಟ್ಟಡಗಳ ಬಾಲ್ಕನಿಗಳು ಮತ್ತು ಮೇಲ್ಛಾವಣಿಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮೆರವಣಿಗೆಯನ್ನು ವೀಕ್ಷಿಸಲು ಯಾವುದೇ ವ್ಯಕ್ತಿ ಅಥವಾ ಗುಂಪು ಪಾರಂಪರಿಕ ರಚನೆಗಳ ತುದಿಗೆ ಹತ್ತಲು ಅವಕಾಶ ನೀಡಬಾರದು ಎಂದು ಆದೇಶಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

1 hour ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

1 hour ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

1 hour ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

2 hours ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

2 hours ago