dasara eshwar khandre
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಕಿಟ್ ವಿತರಣೆ ಮಾಡಲಾಯಿತು.
ಕಿಟ್ ವಿತರಣೆ ಮಾಡಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಅರ್ಜುನ ಆನೆಯನ್ನು ನೆನೆದರು. ಈ ಕುರಿತು ಮಾತನಾಡಿದ ಅವರು, ಅರ್ಜುನ ಸ್ಮಾರಕವನ್ನು ಶೀಘ್ರದಲ್ಲೆ ಉದ್ಘಾಟನೆ ಮಾಡಲಾಗುವುದು ಎಂದರು.
ಇದನ್ನು ಓದಿ : Mysuru Dasara | ಗಜಪಡೆಗಳ ಸೆಲ್ಫೀ, ರೀಲ್ಸ್ ಗೆ ಅವಕಾಶವಿಲ್ಲ
ಇನ್ನು ಮಾವುತರು, ಕಾವಾಡಿಗಳ ಕಾರ್ಯ ವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದ ಸಚಿವರು, ಗೋವಾ, ಆಂಧ್ರದಿಂದಲೂ ನಮ್ಮ ಮಾವುತರಿಗೆ ಬೇಡಿಕೆ ಇದೆ. ಆನೆ ಸೆರೆ ಹಾಗೂ ಪಳಗಿಸುವಲ್ಲಿ ನಮ್ಮ ಮಾವುತರು ಮಂಚೂಣಿಯಲ್ಲಿದ್ದಾರೆ. 218 ಜನ ಮಾವುತ ಕಾವಾಡಿಗಳು ಇದ್ದಾರೆ. ನಿಮ್ಮ ಸಂಬಳ ಹೆಚ್ಚಳ ಮಾಡುವ ಪ್ರಸ್ತಾವನೆ ಇದೆ. ಪುಂಡಾನೆ ಸೆರೆ, ಆನೆಗಳ ಆರೋಗ್ಯ ಎಲ್ಲವನ್ನೂ ಮಾವುತ ಕಾವಾಡಿಗಳೇ ನೋಡಿಕೊಳ್ಳುತ್ತಿದ್ದಾರೆ. ನಿಮ್ಮದು ಮಹತ್ವವಾದ ಕಲೆ. ವೈಜ್ಞಾನಿಕ ತರಬೇತಿ ಕೊಡುವ ಕೆಲಸ ಮಾಡುತ್ತಿದ್ದೇವೆ.
8 ಸಾವಿರ ಮೌಲ್ಯದ ಒಂದು ಕಿಟ್ ವಿತರಣೆ ಮಾಡುತ್ತಿದ್ದೇನೆ. ನಿಮಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಅರಣ್ಯ ಇಲಾಖೆ ನೀಡಲಿದೆ ಎಂದು ಭರವಸೆ ನೀಡಿದರು.
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…
ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…