ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಆಹಾರ ಮೇಳ ಉದ್ಘಾಟನೆಗೊಂಡಿದೆ.
ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ದಸರಾ ಆಹಾರ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಬಳಿಕ ಸಿಎಂ ಸಿದ್ದರಾಮಯ್ಯ ಅವರು, ಆಹಾರ ಮೇಳದ ಮಳಿಗೆಗಳನ್ನು ವೀಕ್ಷಣೆ ಮಾಡಿ ಮೇಲುಕೋಟೆ ಪುಳಿಯೋಗರೆ ಸವಿದು ಖುಷಿಪಟ್ಟರು. ಈ ವೇಳೆ ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಶಾಸಕರು ಸಾಥ್ ನೀಡಿದರು.





