ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ ಮಹೋತ್ಸವ: ಇಂದಿನಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್‌ ಆರಂಭವಾಗಲಿದೆ.

ಇಂದಿನಿಂದ ಸೆಪ್ಟೆಂಬರ್.‌29ರವರೆಗೆ ಖಾಸಗಿ ದರ್ಬಾರ್‌ ಜರುಗಲಿದ್ದು, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ರತ್ನಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ.

ಇಂದು ಬೆಳಿಗ್ಗೆ ಚಾಮುಂಡಿತೊಟ್ಟಿಯಲ್ಲಿ ಯದುವೀರ್‌ ಒಡೆಯರ್‌ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್‌ ಅವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣ ಧಾರಣೆ ಮಾಡಲಾಗಿದೆ.

ಬಳಿಕ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಸೇರಿದಂತೆ ಕಳಸ ಹೊತ್ತು ಮಹಿಳೆಯರು ಬಂದು ಮಂಗಳವಾದ್ಯದೊಂದಿಗೆ ಸವಾರಿ ತೊಟ್ಟಿಯ ಪೂಜಾ ಕೈಂಕರ್ಯಗಳು ನೆರವೇರಿದವು.

ಬಳಿಕ ಯದುವೀರ್‌ ಒಡೆಯರ್‌ ಅವರು ರತ್ನ ಖಚಿತ ಸಿಂಹಾಸನ ಅಲಂಕರಿಸಿದರು. ಸೆಪ್ಟೆಂಬರ್.‌29ರಂದು ಬೆಳಿಗ್ಗೆ 10.10ರಿಂದ 10.30ರ ಒಳಗೆ ಒಡೆಯರ್‌ ಅವರು ಸರಸ್ವತಿ ಪೂಜೆ ನೆರವೇರಿಸಲಿದ್ದು, ಅಂದು ರಾತ್ರಿ ಖಾಸಗಿ ದರ್ಬಾರ್‌ ಕೊನೆಗೊಳ್ಳಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago