ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳೆಯರಿಗೆ ವಾಕಥಾನ್ ಆಯೋಜನೆ ಮಾಡಲಾಗಿತ್ತು.
ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರ ವಾಕಥಾನ್‌ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಚಾಲನೆ ನೀಡಿದರು.
ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಪಾರಂಪರಿಕ ಸೈಕಲ್ ಸವಾರಿ
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಜೆ.ಕೆ.ಮೈದಾನದವರೆಗೆ ಆಯೋಜಿಸಿದ್ದ ವಾಕಥಾನ್‌ನಲ್ಲಿ ನೂರಾರು ಮಹಿಳೆಯರು ಭಾಗಿಯಾಗಿ, ಮೈಸೂರು ಸಿಲ್ಕ್ ಸೀರೆ ತೊಟ್ಟು, ಮೈಸೂರು ಮಲ್ಲಿಗೆ ಮುಡಿದು ಮಿಂಚಿದರು.
ಮೈಸೂರು ಪಾಕ್, ಮೈಸೂರು ವಿಳ್ಯದೆಲೆ, ನಂಜನಗೂಡು ರಸಬಾಳೆ ಸೇರಿದಂತೆ ಮೈಸೂರಿನ ವಿಶೇಷತೆಗಳನ್ನು ಸಾರಿದ ವಾಕಥಾನ್‌ನಲ್ಲಿ ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಹೆಜ್ಜೆ ಹಾಕಿದರು.





