Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಮೈಸೂರು ದಸರಾ ಮಹೋತ್ಸವ: ರೈತ ದಸರಾದ ಪ್ರಮುಖ ಆಕರ್ಷಣೆಗಳಿವು.!

ಮೈಸೂರು: ನಮ್ಮ ಪರಿಸರವನ್ನು, ಸಂಸ್ಕಾರವನ್ನು, ಹಿಂದೆ ನಡೆದುಬಂದ ವಿಚಾರಗಳನ್ನು ಮುಂದುವರೆಸುವಲ್ಲಿ ನಮ್ಮ ನಾಡಿನ ರೈತರು ಎಂದೆಂದಿಗೂ ಸಹ ಮುಂದು. ಈ ಬಾರಿ ರೈತ ದಸರಾದಲ್ಲಿ ರೈತರಿಗೆ ಹೆಚ್ಚು ಅವಕಾಶ ನೀಡಬೇಕು, ರೈತರ ಬದುಕಿಗೆ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂದು ಹೇಳಿ ರೈತ ದಸರಾಗೆ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರು ಚಾಲನೆ ನೀಡಿದರು.

ಇಂದು ಮೈಸೂರು ದಸರಾ ಅಂಗವಾಗಿ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ, ರೈತ ದಸರಾ ಮೆರವಣಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ದಸರಾ ರಾಜ್ಯ ಮತ್ತು ರಾಷ್ಟ್ರ ಮಟ್ಟ ಅಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದು ನಮ್ಮ ದೇಶದ ಹೆಮ್ಮೆಯ ವಿಷಯವಾಗಿದೆ ಎಂದರು.

ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರೈತ ದಸರಾ ಸಂಭ್ರಮ

ಪಶುಸಂಗೋಪನಾ ಹಾಗೂ ರೇಷ್ಮೆ ಖಾತೆ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ, ರೈತ ದಸರಾದಲ್ಲಿ ಹೊಸ ಹೊಸ ತಂತ್ರಜ್ಞಾನದ ಪರಿಚಯ ಮಾಡುವುದು, ಅವುಗಳ ಉಪಯೋಗದ ಬಗ್ಗೆ ತಿಳಿಸುವಂತಹ ಕೆಲಸ ಮಾಡುತ್ತಿರುವುದು ಬಹಳ ಸಂತೋಷದ ವಿಷಯವಾಗಿದೆ ಎಂದು ಹೇಳಿದರು.

ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ದೇವರಾಜ ಅರಸು ರಸ್ತೆಯ ಮೂಲಕ ಜೆ. ಕೆ ಗ್ರೌಂಡ್‌ವರೆಗೂ ಸಾಗಿದ ರೈತ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದರು. ಈ ಬಾರಿ ವಿಶೇಷವಾಗಿ ನಂದಿ ಧ್ವಜ, ನಗಾರಿ ಹಾಗೂ ತಮಟೆ, ವೀರಗಾಸೆ, ವೀರಗಾಸೆ ವೀರಭದ್ರ ನೃತ್ಯ, ಖಡ್ಗ ಪ್ರದರ್ಶನ, ಕಂಸಾಳೆ ನೃತ್ಯ, ಚಿಲಿಪಿಲಿ ಗೊಂಬೆ, ನಾದಸ್ವರ ಪೂಜೆ ಕುಣಿತ ಜೊತೆಗೆ ವಿವಿಧ ತಳಿಯ ಎತ್ತುಗಳು, ಕರುಗಳು, ಆಂಧ್ರ ತಳಿಯಾದ ಪುಂಗನೂರು ಎತ್ತು, ಹೋರಿ, ಹಳ್ಳಿಕಾರ್ ತಳಿ , ಬಂಡೂರು ಕುರಿಗಳು, ಎತ್ತಿನಗಾಡಿ ಎತ್ತುಗಳನ್ನು ಕರೆಸಲಾಗಿತ್ತು, ಹೊಸ ಹೊಸ ಕೃಷಿ ತಂತ್ರಜ್ಞಾನಗಳಾದ ಬೆಳೆ ಸಿಂಪಡಿಸುವ ಡ್ರೋನ್ ತಂತ್ರಜ್ಞಾನ ಯಂತ್ರ, ಭತ್ತ ನಾಟಿ ಯಂತ್ರ, ಇಪ್ಕೋ ನ್ಯಾನೋ ಯೂರಿಯಾ ಲಿಕ್ವಿಡ್, ಸ್ವರಾಜ್ ಯಂತ್ರ, ಕಿಸಾನ್ ಬಂಡಿ, ಪವರ್ ಇಂಟರ್ ಕಲ್ಟಿವೇಟರ್ ಯಂತ್ರ, ಕಳೆ ತೆಗೆಯುವ ಯಂತ್ರ, ಹೈಟೆಕ್ ಹಾರ್ವೆಸ್ಟರ್ ಹಬ್, ಬಹು ಬೆಳೆಯ ಒಕ್ಕಣೆ ಯಂತ್ರ, ಭತ್ತದ ಬೇಲರ್, ಕಬ್ಬು ನಾಟಿ ಯಂತ್ರ, ಕಬ್ಬು ಕಟಾವು ಯಂತ್ರ ತೋಟಗಾರಿಕೆ ಇಲಾಖೆಯ ಟ್ಯಾಬ್ಲೋಗಳಂತಹ ಹೊಸ ಹೊಸ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಯಿತು.

Tags:
error: Content is protected !!