ಮೈಸೂರು: ನಮ್ಮ ಪರಿಸರವನ್ನು, ಸಂಸ್ಕಾರವನ್ನು, ಹಿಂದೆ ನಡೆದುಬಂದ ವಿಚಾರಗಳನ್ನು ಮುಂದುವರೆಸುವಲ್ಲಿ ನಮ್ಮ ನಾಡಿನ ರೈತರು ಎಂದೆಂದಿಗೂ ಸಹ ಮುಂದು. ಈ ಬಾರಿ ರೈತ ದಸರಾದಲ್ಲಿ ರೈತರಿಗೆ ಹೆಚ್ಚು ಅವಕಾಶ ನೀಡಬೇಕು, ರೈತರ ಬದುಕಿಗೆ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂದು ಹೇಳಿ ರೈತ ದಸರಾಗೆ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರು ಚಾಲನೆ ನೀಡಿದರು.
ಇಂದು ಮೈಸೂರು ದಸರಾ ಅಂಗವಾಗಿ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ, ರೈತ ದಸರಾ ಮೆರವಣಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ದಸರಾ ರಾಜ್ಯ ಮತ್ತು ರಾಷ್ಟ್ರ ಮಟ್ಟ ಅಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದು ನಮ್ಮ ದೇಶದ ಹೆಮ್ಮೆಯ ವಿಷಯವಾಗಿದೆ ಎಂದರು.
ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರೈತ ದಸರಾ ಸಂಭ್ರಮ
ಪಶುಸಂಗೋಪನಾ ಹಾಗೂ ರೇಷ್ಮೆ ಖಾತೆ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ, ರೈತ ದಸರಾದಲ್ಲಿ ಹೊಸ ಹೊಸ ತಂತ್ರಜ್ಞಾನದ ಪರಿಚಯ ಮಾಡುವುದು, ಅವುಗಳ ಉಪಯೋಗದ ಬಗ್ಗೆ ತಿಳಿಸುವಂತಹ ಕೆಲಸ ಮಾಡುತ್ತಿರುವುದು ಬಹಳ ಸಂತೋಷದ ವಿಷಯವಾಗಿದೆ ಎಂದು ಹೇಳಿದರು.
ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ದೇವರಾಜ ಅರಸು ರಸ್ತೆಯ ಮೂಲಕ ಜೆ. ಕೆ ಗ್ರೌಂಡ್‌ವರೆಗೂ ಸಾಗಿದ ರೈತ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದರು. ಈ ಬಾರಿ ವಿಶೇಷವಾಗಿ ನಂದಿ ಧ್ವಜ, ನಗಾರಿ ಹಾಗೂ ತಮಟೆ, ವೀರಗಾಸೆ, ವೀರಗಾಸೆ ವೀರಭದ್ರ ನೃತ್ಯ, ಖಡ್ಗ ಪ್ರದರ್ಶನ, ಕಂಸಾಳೆ ನೃತ್ಯ, ಚಿಲಿಪಿಲಿ ಗೊಂಬೆ, ನಾದಸ್ವರ ಪೂಜೆ ಕುಣಿತ ಜೊತೆಗೆ ವಿವಿಧ ತಳಿಯ ಎತ್ತುಗಳು, ಕರುಗಳು, ಆಂಧ್ರ ತಳಿಯಾದ ಪುಂಗನೂರು ಎತ್ತು, ಹೋರಿ, ಹಳ್ಳಿಕಾರ್ ತಳಿ , ಬಂಡೂರು ಕುರಿಗಳು, ಎತ್ತಿನಗಾಡಿ ಎತ್ತುಗಳನ್ನು ಕರೆಸಲಾಗಿತ್ತು, ಹೊಸ ಹೊಸ ಕೃಷಿ ತಂತ್ರಜ್ಞಾನಗಳಾದ ಬೆಳೆ ಸಿಂಪಡಿಸುವ ಡ್ರೋನ್ ತಂತ್ರಜ್ಞಾನ ಯಂತ್ರ, ಭತ್ತ ನಾಟಿ ಯಂತ್ರ, ಇಪ್ಕೋ ನ್ಯಾನೋ ಯೂರಿಯಾ ಲಿಕ್ವಿಡ್, ಸ್ವರಾಜ್ ಯಂತ್ರ, ಕಿಸಾನ್ ಬಂಡಿ, ಪವರ್ ಇಂಟರ್ ಕಲ್ಟಿವೇಟರ್ ಯಂತ್ರ, ಕಳೆ ತೆಗೆಯುವ ಯಂತ್ರ, ಹೈಟೆಕ್ ಹಾರ್ವೆಸ್ಟರ್ ಹಬ್, ಬಹು ಬೆಳೆಯ ಒಕ್ಕಣೆ ಯಂತ್ರ, ಭತ್ತದ ಬೇಲರ್, ಕಬ್ಬು ನಾಟಿ ಯಂತ್ರ, ಕಬ್ಬು ಕಟಾವು ಯಂತ್ರ ತೋಟಗಾರಿಕೆ ಇಲಾಖೆಯ ಟ್ಯಾಬ್ಲೋಗಳಂತಹ ಹೊಸ ಹೊಸ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಯಿತು.
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ…