ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ಅತ್ಯಾಕರ್ಷಕ ಡ್ರೋನ್ ಪ್ರದರ್ಶನಕ್ಕೆ ಮನಸೋತ ಮೈಸೂರಿಗರು

– ಬಣ್ಣಬಣ್ಣದ ಚಿತ್ತಾರ ಬಿಡಿಸಿದ 3000 ಡ್ರೋನ್ ಗಳು

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ, ಬಾನಂಗಳದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸಿದ 3000 ಡ್ರೋನ್ ಗಳು ಹೊಸ ಲೋಕವನ್ನು ಸೃಷ್ಟಿಸಿತು. ಇದರೊಂದಿಗೆ 2983 ಡ್ರೋನ್ ಗಳನ್ನು ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ‌ ನಿರ್ಮಿಸುವ ಮೂಲಕ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮೈಸೂರಿನ ಹಿರಿಮೆಯನ್ನು ಹೆಚ್ಚಿಸಿದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಆಯೋಜಿಸಿದ್ದ ರೋಮಾಂಚಕಾರಿ ಡ್ರೋನ್ ಪ್ರದರ್ಶನ
ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನೆರೆದಿದ್ದ ಸಾವಿರಾರು ಜನರ ಕಣ್ಮನ ಸೆಳೆಯಿತು. ನೋಡುಗರನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ ಡ್ರೋನ್ ಪ್ರದರ್ಶನ ದಸರಾ ಮಹೋತ್ಸವದ ಸಂಭ್ರಮಕ್ಕೆ ರಂಗು ನೀಡಿತು.

ಗಿನ್ನಿಸ್ ವಿಶ್ವ ದಾಖಲೆ ನಿರ್ಮಾಣ
ಸೆಸ್ಕ್ ವತಿಯಿಂದ ನಡೆಸಲಾದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನದಲ್ಲಿ ಹೊಸ ಗಿನ್ನಿಸ್ ವಿಶ್ವ ದಾಖಲೆ ನಿರ್ಮಾಣಗೊಂಡಿತು. ಈ ಬಾರಿಯ ಡ್ರೋನ್ ಪ್ರದರ್ಶನದಲ್ಲಿ ಒಟ್ಟು 2983 ಡ್ರೋನ್ ಗಳನ್ನು ಬಳಸಿಕೊಂಡು ಬಾನಂಗಳದಲ್ಲಿ ಬೃಹದಾಕಾರದ ಪ್ರಾಣಿ(ಹುಲಿ) ಕಲಾಕೃತಿಯನ್ನು ನಿರ್ಮಾಣ ಮಾಡುವ ಮೂಲಕ ಹೊಸದಾಗಿ ಗಿನ್ನಿಸ್ ವಿಶ್ವ ದಾಖಲೆ‌ ನಿರ್ಮಾಣ ಮಾಡಲಾಯಿತು. ಈ ಮೊದಲು 1985 ಡ್ರೋನ್ ಗಳನ್ನು ಬಳಸಿಕೊಂಡು ಹುಲಿಯ ಕಲಾಕೃತಿ ರಚಿಸುವ ಮೂಲಕ ದಾಖಲೆ ನಿರ್ಮಿಸಲಾಗಿತ್ತು.

ಇದನ್ನೂ ಓದಿ:-ಶ್ವಾನ ಪ್ರದರ್ಶನ : ಜರ್ಮನ್ ಶಫರ್ಡ್‌ಗೆ ಮೊದಲ ಸ್ಥಾನ

3000 ಡ್ರೋನ್ ಗಳ ಚಿತ್ತಾರ:
ಕಳೆದ ವರ್ಷ ನಡೆದ ಡ್ರೋನ್ ಪ್ರದರ್ಶನದಲ್ಲಿ 1500 ಡ್ರೋನ್ ಗಳ ಮೂಲಕ ಆಕರ್ಷಕ ಪ್ರದರ್ಶನವನ್ನು ನೀಡಲಾಗಿತ್ತು. ಆದರೆ ಈ ಬಾರಿಯ ಪ್ರದರ್ಶನವನ್ನು ಮತ್ತಷ್ಟು ಆಕರ್ಷಣೀಯವಾಗಿಸುವ ಸಲುವಾಗಿ ಒಟ್ಟು 3000 ಡ್ರೋನ್ ಬಳಸಿಕೊಂಡು ನಡೆಸಲಾದ ಡ್ರೋನ್ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು. ಏಕಕಾಲದಲ್ಲಿ ಬಾನೆತ್ತರಕ್ಕೆ ಹಾರಿದ ಡ್ರೋನ್ ಗಳು ಬಣ್ಣಬಣ್ಣದ ದೀಪಗಳಿಂದ ಮಿನುಗುತ್ತಾ ಆಕರ್ಷಕ ಕಲಾಕೃತಿಗಳನ್ನು ಸೃಷ್ಟಿಸಿದವು.

ಸೌರಮಂಡಲ, ವಿಶ್ವಭೂಪಟ, ದೇಶದ ಹೆಮ್ಮೆಯ ಸೈನಿಕ, ನವಿಲು, ರಾಷ್ಟ್ರೀಯ ಪ್ರಾಣಿ ಹುಲಿ, ಡಾಲ್ಫಿನ್, ಈಗಲ್, ಸರ್ಪದ ಮೇಲೆ ಶ್ರೀಕೃಷ್ಣ ನೃತ್ಯ ಮಾಡುವುದು, ಕಾವೇರಿ ಮಾತೆ, ಕರ್ನಾಟಕ ಭೂಪಟದೊಂದಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್, ಪಂಚ ಗ್ಯಾರಂಟಿ ಯೋಜನೆಗಳಿಂದ ಕೂಡಿದ್ದ ಕರ್ನಾಟಕ ಭೂಪಟ‌, ಅಂಬಾರಿ ಆನೆ, ನಾಡದೇವತೆ ಚಾಮುಂಡೇಶ್ವರಿ ಕಲಾಕೃತಿಗಳು ನೋಡುಗರಿಗೆ ಅದ್ಭುತ ಮನರಂಜನೆ ನೀಡಿದವು.

ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಜ್ಯೋತಿ ಬೆಳಗುವ ಮೂಲಕ ಡ್ರೋನ್ ಪ್ರದರ್ಶನಕ್ಕೆ ಚಾಲನೆ ನೀಡಿದರು. ಡ್ರೋನ್ ಪ್ರದರ್ಶನದ ಆಕರ್ಷಣೆ ಕಣ್ತುಂಬಿಕೊಳ್ಳಲು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜನರು ಕಿಕ್ಕಿರಿದು ತುಂಬಿದ್ದರು.

ಕುನಾಲ್ ಗಾಂಜಾವಾಲ ಹಾಡಿನ ಮೋಡಿ
ಡ್ರೋನ್ ಪ್ರದರ್ಶನ ಆರಂಭಕ್ಕೂ ಮುನ್ನ ಖ್ಯಾತ ಹಿನ್ನಲೆ ಗಾಯಕ ಕುನಾಲ್ ಗಾಂಜಾವಾಲ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ವೇದಿಕೆಗೆ ಬರುತ್ತಿದ್ದಂತೆ ಮೊದಲಿಗೆ ಪುನೀತ್ ರಾಜ್‍ಕುಮಾರ್ ಅಭಿನಯದ “ನೀನೆ ನೀನೆ”.. ಗೀತೆಯನ್ನು ಹಾಡಿ ರಂಜಿಸಿದ ಕುನಾಲ್ ಗಾಂಜಾವಾಲ, ಆ ನಂತರದಲ್ಲಿ ಕನ್ನಡದ “ಖುಷಿಯಾಗಿದೆ ಏಕೋ ನಿನ್ನಿಂದಲೆ…”, “ಒಂದೇ ಒಂದು ಸಾರಿ ಕಣ್ಮುಂದೆ ಬಾರೆ…”, “ನಿನ್ನ ಕಂಡ ಕ್ಷಣದಿಂದ…”, “ಹುಡುಗಿ ಹುಡುಗಿ ನಿನ್ನ ಕಂಡಾಗ”, “ಕಿವಿ ಮಾತೊಂದು ಹೇಳಲೆ ನಾನಿಂದು” ಸೇರಿದಂತೆ ಹಿಂದಿಯ ಹಲವು ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಎಂಎಲ್ಸಿ ಕೆ. ಶಿವಕುಮಾರ್, ಅಪರ‌ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಅಪರ‌ ಜಿಲ್ಲಾಧಿಕಾರಿ ಶಿವರಾಜ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ತಾಂತ್ರಿಕ ‌ವಿಭಾಗದ ನಿರ್ದೇಶಕ ಡಿ.ಜೆ. ದಿವಾಕರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಂಡಿಎ ಆಯುಕ್ತ ಕೆ.ಆರ್. ರಕ್ಷಿತ್, ಎಸ್ಪಿ ವಿಷ್ಣುವರ್ಧನ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್, ದಸರಾ ದೀಪಾಲಂಕಾರ ಉಪ ಸಮಿತಿ(ಅಧಿಕಾರೇತರ) ಅಧ್ಯಕ್ಷ ರಾಘವೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

6 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

6 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

7 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

8 hours ago