ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್.22ರಿಂದ ನವರಾತ್ರಿ ರಂಗೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ರಂಗೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಅವರು, ಇದೇ ಸೆಪ್ಟೆಂಬರ್.22ರಿಂದ 10 ದಿನಗಳ ಕಾಲ ನಾಟಕಗಳು ಹಾಗೂ ವಿವಿಧ ಜಾನಪದ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಾಗುತ್ತಿದೆ.
ಸೆಪ್ಟೆಂಬರ್.22ರಂದು ಸಂಜೆ 5.30ಕ್ಕೆ ಭೂಮಿಗೀತ ರಂಗಮಂದಿರದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಅಕ್ಟೋಬರ್.1ರವರೆಗೆ ರಂಗಾಯಣದ ವನರಂಗದಲ್ಲಿ ಪ್ರತಿ ದಿನ ಸಂಜೆ 5.30ಕ್ಕೆ ಅಂತರರಾಜ್ಯ ಕಲಾತಂಡಗಳಿಂದ ಜಾನಪದ ನೃತ್ಯ ಪ್ರದರ್ಶನವಿದ್ದು, ಪ್ರತಿದಿನ ಸಂಜೆ 7 ಗಂಟೆಗೆ ಭೂಮಿಗೀತದಲ್ಲಿ ವಿವಿಧ ನಾಟಕಗಳನ್ನು ಪ್ರದರ್ಶಿಸಲಾಗುತ್ತಿದೆ ಎಂದು ವಿವರಿಸಿದರು.





