ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ: ಸೆಪ್ಟೆಂಬರ್.‌22ರಿಂದ ನವರಾತ್ರಿ ರಂಗೋತ್ಸವ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್.‌22ರಿಂದ ನವರಾತ್ರಿ ರಂಗೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ರಂಗೋತ್ಸವದ ಪೋಸ್ಟರ್‌ ಬಿಡುಗಡೆಗೊಳಿಸಿ ಮಾತನಾಡಿದ ರಂಗಾಯಣ ನಿರ್ದೇಶಕ ಸತೀಶ್‌ ತಿಪಟೂರು ಅವರು, ಇದೇ ಸೆಪ್ಟೆಂಬರ್.‌22ರಿಂದ 10 ದಿನಗಳ ಕಾಲ ನಾಟಕಗಳು ಹಾಗೂ ವಿವಿಧ ಜಾನಪದ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಾಗುತ್ತಿದೆ.

ಸೆಪ್ಟೆಂಬರ್.‌22ರಂದು ಸಂಜೆ 5.30ಕ್ಕೆ ಭೂಮಿಗೀತ ರಂಗಮಂದಿರದಲ್ಲಿ ಸಚಿವ ಶಿವರಾಜ್‌ ತಂಗಡಗಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅಕ್ಟೋಬರ್‌.1ರವರೆಗೆ ರಂಗಾಯಣದ ವನರಂಗದಲ್ಲಿ ಪ್ರತಿ ದಿನ ಸಂಜೆ 5.30ಕ್ಕೆ ಅಂತರರಾಜ್ಯ ಕಲಾತಂಡಗಳಿಂದ ಜಾನಪದ ನೃತ್ಯ ಪ್ರದರ್ಶನವಿದ್ದು, ಪ್ರತಿದಿನ ಸಂಜೆ 7 ಗಂಟೆಗೆ ಭೂಮಿಗೀತದಲ್ಲಿ ವಿವಿಧ ನಾಟಕಗಳನ್ನು ಪ್ರದರ್ಶಿಸಲಾಗುತ್ತಿದೆ ಎಂದು ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…

9 mins ago

ಸೇವಾ ಕೈಂಕರ್ಯದ ಪ್ರತಿರೂಪ ಚೈತನ್ಯ ಚಾರಿಟಬಲ್ ಟ್ರಸ್ಟ್‌

ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…

32 mins ago

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

2 hours ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

3 hours ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

3 hours ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

11 hours ago