ನಮ್ಮ ಮೈಸೂರ ದಸರಾ 2025

Mysuru Dasara | ಗಜಪಡೆಗಳ ಸೆಲ್ಫೀ, ರೀಲ್ಸ್ ಗೆ ಅವಕಾಶವಿಲ್ಲ

ಮೈಸೂರು : ದಸರಾ ಆನೆಗಳ ಸೊಂಡಿಲು, ದಂತ ಹಿಡಿದುಕೊಂಡು ಫೋಟೋ ರೀಲ್ಸ್ ಮಾಡಿ ಸಾಮಾಜಿಕ ತಾಣಗಳಲ್ಲಿ ಹಾಕುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತದಕ್ಕೆ ಕಡಿವಾಣ ಹಾಕಲಾಗಿದೆ ಎಂದು ಸಚಿವ ಈಶ್ವರ್‌ ಬಿ. ಖಂಡ್ರೆತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಆನೆಗಳನ್ನು ಪಳಗಿಸಿದ್ದರೂ, ಕೆಲವೊಂದು ಸಂದರ್ಭದಲ್ಲಿ ಪ್ರಾಣಿಗಳ ವರ್ತನೆಯನ್ನು ಊಹಿಸುವುದೂ ಅಸಾಧ್ಯ. ಹೀಗಾಗಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಆನೆಗಳ ಬಳಿ ಯಾರಿಗೂ ಬಿಡದಂತೆ ಸೂಚನೆ ನೀಡಲಾಗಿದೆ. ಆದರೂ ಕೆಲವರು ಫೋಟೋ, ರೀಲ್ಸ್ ಮಾಡಿದ್ದು ಇಂತಹವರಿಗೆ ನಿರ್ದಾಕ್ಷಿಣ್ಯವಾಗಿ ದಂಡ ಹಾಕಲು ಸೂಚಿಸಲಾಗಿದೆ ಎಂದರು.

ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಜಂಬೂಸವಾರಿ ರಿಹರ್ಸಲ್‌

ಕಳೆದ 18ರಂದು ಮಹಿಳೆಯೊಬ್ಬರು ಸಿಬ್ಬಂದಿಯ ಕಣ್ತಪ್ಪಿಸಿ ರೀಲ್ಸ್ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯನ್ನು ನೀಡಲಾಗಿದೆ. ಇದು ಮೇಲ್ನೋಟಕ್ಕೆ ಕರ್ತವ್ಯಲೋಪವಾಗಿದೆ ಎಂಬುದನ್ನು ಪುಷ್ಟೀಕರಿಸಿದ್ದು, ಅಧಿಕಾರಿ, ಸಿಬ್ಬಂದಿಗೂ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಯಸಳೂರಿನಲ್ಲಿ ಅರ್ಜುನ ಆನೆ ಸ್ಮಾರಕ ಅನಾವರಣ:
ಮೈಸೂರು ದಸರಾ ಜಂಬೂಸವಾರಿಯಲ್ಲಿ 8 ಬಾರಿ ಅಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆಹಾಕುತ್ತಾ ಜನಮನ ಗೆದ್ದಿದ್ದ ಅರ್ಜುನ ಆನೆ ಹಾಸನ ಜಿಲ್ಲೆ ಯಸಳೂರು ಬಳಿ ಆನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾಗಿದ್ದು, ಸರ್ಕಾರ ಅರ್ಜುನ ಇದ್ದ ನಾಗರಹೊಳೆಯ ಬಳ್ಳೆ ಮತ್ತು ಯಸಳೂರಿನಲ್ಲಿ ಸ್ಮಾರಕ ನಿರ್ಮಿಸಿದೆ ಎಂದರು.

ಈಗಾಗಲೇ ಬಳ್ಳೆಯ ಸ್ಮಾರಕವನ್ನು ವಿಧ್ಯುಕ್ತವಾಗಿ ಉದ್ಘಾಟಿಸಲಾಗಿದ್ದು, ಈ ತಿಂಗಳಲ್ಲಿ ಯಸಳೂರಿನಲ್ಲೂ ಅರ್ಜುನ ಆನೆ ಸ್ಮಾರಕ ಉದ್ಘಾಟಿಸುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago