ಮೈಸೂರು : ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ೮ ನೇ ದಿನದ ‘ಯುವ ಸಂಭ್ರಮ’ ವೇದಿಕೆಯಲ್ಲಿ ಮಕರ ಸಂಕ್ರಾಂತಿಯ ಸುಗ್ಗಿ ಸಂಭ್ರಮವನ್ನು ವಿದ್ಯಾರ್ಥಿಗಳು ಅನಾವರಣಗೊಳಿಸಿದರು.
ಮೈಸೂರಿನ ಗೋಕುಲಂನ ಮಾತೃಮಂಡಳಿ ಶಿಶು ವಿಕಾಸ ಕೇಂದ್ರದ ವಿದ್ಯಾರ್ಥಿಗಳು ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಮತ್ತು ಸುಗ್ಗಿ ಸಂಭ್ರಮವನ್ನು ತೆರೆದಿಟ್ಟಾಗ ನೆರೆದಿದ್ದ ಯುವ ಸಮೂಹ ಚಪ್ಪಾಳೆ ತಟ್ಟಿದರು. ಗುಂಡ್ಲುಪೇಟೆಯ ಶ್ರೀ ಡಿ.ಬಿ.ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರೈತರ ಕೃಷಿ ಚಟುವಟಿಕೆಯನ್ನು ಅನಾವರಣಗೊಳಿಸಿದರು.
ಮೈಸೂರಿನ ಶೀರಾಂಪುರದ ನಿರ್ಮಲ ಕಾಂಪೋಸಿಟ್ ಕಾಲೇಜು, ಬೋಗಾದಿಯ ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಸಂಸ್ಥೆ, ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು, ಕನಕದಾಸ ನಗರದ ಕೌಟಿಲ್ಯ ವಿದ್ಯಾಲಯದ ಪ್ರೀ ಯೂನಿವರ್ಸಿಟಿ ಕಾಲೇಜು, ನಾಗಮಂಗಲದ ಪ್ರಾಚಾರ್ಯ ಕಾರ್ಯಾಲಯ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ , ಮಡಿಕೇರಿಯ ಮಹದೇವ್ ಪೇಟ್ ಶ್ರೀರಾಜೇಶ್ವರಿ ವಿದ್ಯಾಲಯದ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ಹೆಜ್ಜೆಹಾಕಿದರು.
ಮೈಸೂರಿನ ಜೆ.ಎಸ್.ಎಸ್. ಪಾಲಿಟೆಕ್ನಿಕ್, ಹಾಸನ ಜಿಲ್ಲೆಯ ಅರಕಲಗೂಡಿನ ಏಕತಾರಿ ಸಾಂಸ್ಕ ತಿಕ ಸಂಘಟನೆ , ಹುಣಸೂರಿನ ಬಿಳಿಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಾನಪದ ವೈವಿಧ್ಯತೆಯ ಪರಂಪರೆ ಸಾರಿದರೆ, ಬೆಂಗಳೂರಿನ ಮತ್ತಿಕೆರೆ ರಾಯಲ್ ಪಿಯು ಕಾಲೇಜು, ಮೈಸೂರಿನ ದಟ್ಟಗಳ್ಳಿಯ ವಿಶ್ವ ಪ್ರಜ್ಞಾ ಪಿಯು ಕಾಲೇಜು, ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜೆ.ಪಿ.ನಗರದ ಜೆ.ಎಸ್.ಎಸ್. ಪದವಿಪೂರ್ವ ಕಾಲೇಜು, ವಿದ್ಯಾವರ್ಧಕ ಸಂಯುಕ್ತ ಪದವಿ ಪೂರ್ವ ಕಾಲೆಜು, ತುಮಕೂರು ಜಿಲ್ಲೆ ಹುಲಿಯೂರು ದುರ್ಗ ಸರ್ಕಾರಿ ಪ.ಪೂ. ಕಾಲೇಜು, ಮಂಡ್ಯ ಜಿಲ್ಲೆ ಮದ್ದೂರಿನ ದಿ ಆರ್.ಕೆ. ಕಾಲೇಜು – ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳು ನೃತ್ಯದ ಮೂಲಕ ಕರ್ನಾಟಕ ವೈಭವವನ್ನ ಸಾದರಪಡಿಸಿದರು.
ನಾಳೆ ಯುವ ಸಂಭ್ರಮಕ್ಕೆ ತೆರೆ : ದಸರಾ ಮಹೋತ್ಸವದ ಅಂಗವಾಗಿ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ೮ ದಿನಗಳಿಂದ ನಡೆಯುತ್ತಿರುವ ಯುವ ಸಂಭ್ರಮಕ್ಕೆ ಇಂದು ತೆರೆಬೀಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…