air show
ಮೈಸೂರು : ಮೈಸೂರಿನಲ್ಲಿ ದಸರಾ ಮಹೋತ್ಸವದ ಸಂಭ್ರಮ ಮನೆ ಮಾಡಿದ್ದು, ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟ ಹಾಗೂ ವಾಯುಪಡೆ ಯೋಧರ ಸಾಹಸ ಪ್ರದರ್ಶನ ದಸರಾ ಸಡಗರವನ್ನು ಮತ್ತಷ್ಟು ಹೆಚ್ಚಿಸಲಿದೆ.
ಹತ್ತು ಹಲವು ಕಾರ್ಯಕ್ರಮಗಳು, ವಿದ್ಯುತ್ ದೀಪಾಲಂಕಾರದಿಂದ ಈಗಾಗಲೇ ದಸರಾ ಸಂಭ್ರಮ ಕಳೆಗಟ್ಟಿದೆ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಭಾರತೀಯ ವಾಯುಪಡೆ ಸಹಯೋಗದಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಬನ್ನಿಮಂಟಪದ ಮೈದಾನದಲ್ಲಿ ಗುರುವಾರ ಏರ್ ಶೋ ಪೂರ್ವಾಭ್ಯಾಸ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ವೈಮಾನಿಕ ಪ್ರದರ್ಶನ ಆಯೋಜಿಸುವಂತೆ ಮನವಿ ಮಾಡಿದ್ದರು. ಇದಲ್ಲದೆ, ಜಿಲ್ಲಾಡಳಿತವೂ ಸಹ ಪತ್ರ ವ್ಯವಹಾರ ಮಾಡಿತ್ತು. ಹಲವು ಬಾರಿ ಮನವಿ ಮಾಡಿದ್ದರಿಂದ ವಾಯುಪಡೆ ಒಪ್ಪಿಗೆ ಸೂಚಿಸಿದ್ದು, ಸೆ.೨೭ ಮತ್ತು ಅ.೧ರಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಏರ್ ಶೋ ಆಯೋಜಿಸಲಾಗಿದೆ.
ಇದನ್ನೂ ಓದಿ:-Mysuru Dasara | ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಅರಮನೆ ನಗರಿ
ಭಾರತೀಯ ವಾಯುಪಡೆಯ ಯೋಧರು ಸುಮಾರು ೪೦ ನಿಮಿಷಗಳ ಕಾಲ ಏರ್ ಶೋ ನಡೆಸಲಿದ್ದಾರೆ. ಇದರಿಂದಾಗಿ ಗುರುವಾರ ಸಂಜೆ ೪ ಗಂಟೆಗೆ ಪೂರ್ವಾಭ್ಯಾಸ ನಡೆಯಲಿದೆ. ವಾಯುಪಡೆ ಸಿಬ್ಬಂದಿಯ ಒಪ್ಪಿಗೆ ಮೇರೆಗೆ ಸ್ಥಳಕ್ಕೆ ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನ ಸೇವೆ ವ್ಯವಸ್ಥೆ ಮಾಡಲಾಗಿದೆ. ಬನ್ನಿಮಂಟಪ ಮೈದಾನದಲ್ಲಿ ಸ್ಥಳ ನಿಗಧಿಯಾಗಿದ್ದು, ಸ್ಥಳದಲ್ಲಿ ಧೂಳು ಬಾರದ ರೀತಿ ಹೆಚ್ಚು ನೀರನ್ನು ಸಿಂಪಡಿಸಲಾಗಿದೆ. ಅಲ್ಲಿಗೆ ಯಾವುದೇ ತಿಂಡಿ ತಿನಿಸು ತರಬಾರದು ಹಾಗೂ ಕಮಾಂಡರ್‌ಗಳು ಬಂದಾಗ ಅಲ್ಲಿ ಮಕ್ಕಳು ಫೋಟೋ ತೆಗೆದುಕೊಳ್ಳಲು ಮುಂದೆ ಹೋಗುತ್ತಾರೆ. ಅಂತಹ ಘಟನೆಗಳು ನಡೆಯದ ರೀತಿ ಪೊಲೀಸ್ ಸಿಬ್ಬಂದಿಗಳು ನೋಡಿಕೊಳ್ಳಬೇಕು. ಕಾರ್ಯಕ್ರಮ ನಿಗದಿತ ಸಮಯಕ್ಕೆ ಸರಿಯಾಗಿ ಆರಂಭವಾಗುವುದರಿಂದ ಪಾಸ್ ಹೊಂದಿರುವ ಸಾರ್ವಜನಿಕರು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಸೀನರಾಗಿರಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…