ನಮ್ಮ ಮೈಸೂರ ದಸರಾ 2025

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಕುದುರೆಗಳಿಗೆ ಅಂತಿಮ ಹಂತದ ಸಿಡಿಮದ್ದು ಸಿಡಿಸುವ ತಾಲೀಮನ್ನು ನಡೆಸಲಾಯಿತು.

ಮೂರನೇ ಹಂತದ ತಾಲೀಮಿನಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ 14 ಆನೆಗಳು ಅಂದರೆ ಕ್ಯಾಪ್ಟನ್‌ ಅಭಿಮನ್ಯು, ಮಹೇಂದ್ರ, ಭೀಮಾ, ಪ್ರಶಾಂತ, ಲಕ್ಷ್ಮೀ, ಹೇಮಾವತಿ, ರೂಪ, ಕಾವೇರಿ, ಕಂಜನ್, ಏಕಲವ್ಯ, ಸುಗ್ರೀವ, ಶ್ರೀಕಂಠ, ಧನಂಜಯ, ಗೋಪಿ ಸೇರಿದಂತೆ 14 ಆನೆಗಳು ಸಿಡಿಮದ್ದು ತಾಲೀಮಿನಲ್ಲಿ ಭಾಗಿಯಾಗಿದ್ದವು.

ಇದನ್ನು ಓದಿ : ಬಾನು ಮುಷ್ತಾಕ್ ನಮ್ಮ ಸಂಪ್ರದಾಯದ ರೀತಿ ದಸರಾ ಉದ್ಘಾಟನೆ ಮಾಡಿದ್ದಾರೆ: ಶಾಸಕ ಶ್ರೀವತ್ಸ

7 ಪಿರಂಗಿ ಗಾಡಿಗಳ ಮೂಲಕ 21 ಸುತ್ತುಗಳ ಸಿಡಿಮದ್ದು ಸಿಡಿಸುವ ಮೂಲಕ ನಡೆದ ತಾಲೀಮಿನಲ್ಲಿ ದಸರಾ ಗಜಪಡೆ ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಕೊನೆಯ 3ನೇ ಹಂತದ ತಾಲೀಮಿನಲ್ಲಿ ಅಶ್ವಾರೋಹಿ ದಳದ 36ಕ್ಕೂ ಹೆಚ್ಚು ಕುದುರೆಗಳು ಭಾಗಿಯಾಗಿದ್ದವು.

ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಕ್ಯಾಪ್ಟನ್‌ ಅಭಿಮನ್ಯ ಜಂಬೂಸವಾರಿ ದಿನದಂದು ಚಿನ್ನದ ಅಂಬಾರಿ ಹೊತ್ತು ರಾಜಬೀದಿಗಳಲ್ಲಿ ಹೆಜ್ಜೆ ಹಾಕಲಿದ್ದಾನೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

49 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago