ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡನೇ ದಿನದ ರೈತ ದಸರಾದಲ್ಲಿಂದು ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ಮೈಸೂರು ನಗರದ ಜೆ.ಕೆ.ಗ್ರೌಂಡ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಅಧಿಕ ಹಾಲು ಕರೆದ ಹಸುವಿಗೆ 1 ಲಕ್ಷ ಬಹುಮಾನ ಸಿಗಲಿದೆ. ಎರಡನೇ ಬಹುಮಾನ 80 ಸಾವಿರ ಸಿಗಲಿದ್ದು, ಮೂರನೇ ಬಹುಮಾನ 60 ಸಾವಿರ ರೂ ಸಿಗಲಿದೆ. ನಾಲ್ಕನೇ ಬಹುಮಾನವಾಗಿ 40 ಸಾವಿರ ನಿಗದಿಯಾಗಿದೆ.
ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಬಂದಿದ್ದ 15 ಎಚ್ಎಫ್ ರಾಸುಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದು ವಿಶೇಷವೆನಿಸಿತು.
ಇದನ್ನು ಓದಿ : ದಸರಾ: ಪ್ರವಾಸಿಗರಿಗೆ ಆರೋಗ್ಯ ಜಾಗೃತಿ, ತಪಾಸಣೆ
ಬೆಳಗ್ಗೆ 6.30ಕ್ಕೆ ಆರಂಭವಾದ ಹಾಲು ಕರೆಯುವ ಸ್ಪರ್ಧೆಯಲ್ಲಿ 20 ನಿಮಿಷಗಳ ಕಾಲಾವಕಾಶವನ್ನು ನಿಗದಿ ಮಾಡಲಾಗಿತ್ತು.
ಬೆಂಗಳೂರು ಆನೇಕಲ್‌ನ ಅಜಯ್ ಬಿನ್ ಪಾಪರೆಡ್ಡಿ ಅವರು, 21.5 ಕೆ.ಜಿ ಹಾಲು ಕರೆಯುವ ಮೂಲಕ ಮೊದಲ ಸ್ಥಾನ ಪಡೆದರೆ, ಪಿರಿಯಾಪಟ್ಟಣ ಚಿಟ್ಟೇನಹಳ್ಳಿ ಸಂಜೀವ್ ಶಿವೇಗೌಡ ಅವರು, 20 ಕೆ.ಜಿ 150 ಗ್ರಾಂ ಹಾಲು ಕರೆದು ಎರಡನೇ ಸ್ಥಾನ ಪಡೆದುಕೊಂಡರು.
ಮೈಸೂರಿನ ಬಂಡೀಪಾಳ್ಯದ ಚೇತನ್ ಶರ್ಮಾ ಬಂಡಿಪಾಳ್ಯ ಅವರು 19.4 ಕೆಜಿ ಮೂರನೇ ಸ್ಥಾನ ಪಡೆದು ಖುಷಿಪಟ್ಟರು.
ಸಂಜೆ ಮತ್ತೊಂದು ಸುತ್ತು ಹಾಲು ಕರೆದ ಬಳಿಕ ಪ್ರಶಸ್ತಿ ಘೋಷಣೆ ನಡೆಯಲಿದ್ದು, ಸಂಜೆಯೇ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…