ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಇಂದು ಜಿಲ್ಲಾಡಳಿತದ ವತಿಯಿಂದ ಔತಣಕೂಟವನ್ನು ಆಯೋಜನೆ ಮಾಡಲಾಗಿತ್ತು.
ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಮಾವುತರು, ಕಾವಾಡಿಗರು ಸೇರಿದಂತೆ ಅವರ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಊಟ ಬಡಿಸಿದರು. ಬಳಿಕ ಸಚಿವರು ಸಹ ಊಟ ಸವಿದು ಖುಷಿಪಟ್ಟರು. ಈ ವೇಳೆ ಮಾವುತರು ಹಾಗೂ ಕಾವಾಡಿಗರ ಕುಟುಂಬಸ್ಥರು ಭೂರಿ ಭೋಜನ ಸವಿದು ಖುಷಿಪಟ್ಟರು.
ಇದನ್ನೂ ಓದಿ: ನೇಪಾಳ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿಗೆ ಪ್ರಧಾನಿ ಮೋದಿ ಅಭಿನಂದನೆ
ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ತನ್ವಿರ್ ಸೇಠ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಊಟದ ಬಳಿಕ ಮಾವುತರು ಹಾಗೂ ಕಾವಾಡಿಗರ ಕುಟುಂಬಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.





