ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೆರಗು ನೀಡಿರುವ ಆಕರ್ಷಕ ಡ್ರೋನ್ ಪ್ರದರ್ಶನ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ. ಸೆ.28, 29ರಂದು ಡ್ರೋನ್ ಶೋ ಪ್ರಾಯೋಗಿಕ ಪ್ರದರ್ಶನ ನಡೆಯಲಿದ್ದು, ಅ.1 ಹಾಗೂ 2ರಂದು ಮುಖ್ಯ ಪ್ರದರ್ಶನ ನಡೆಯಲಿದೆ.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ನಿಂದ ಆಯೋಜಿಸಲಾಗುತ್ತಿರುವ ಡ್ರೋನ್ ಪ್ರದರ್ಶನ ಕಳೆದ ವರ್ಷ ನೋಡುಗರಿಗೆ ವಿಶೇಷ ಅನುಭವ ನೀಡಿತ್ತು. ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಈ ಡ್ರೋನ್ ಪ್ರದರ್ಶನ ಈ ಬಾರಿ ಇನ್ನಷ್ಟು ರೋಮಾಂಚನಕಾರಿಯಾಗಿರಲಿದೆ. ಸೆ.28ರಂದು ಸಂಜೆ 7 ಗಂಟೆಯಿಂದ ಡ್ರೋನ್ ಪ್ರದರ್ಶನ ನಡೆಯಲಿದ್ದು, ಇದಕ್ಕೂ ಮುನ್ನ ಸಾರ್ವಜನಿಕರ ಮನರಂಜನೆಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 4 ಗಂಟೆಯಿಂದ ಪಂಜಿನ ಕವಾಯತು ಮೈದಾನ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನು ಓದಿ: ಓದುಗರ ಪತ್ರ: ದಸರಾ ವಿದ್ಯುತ್ ದೀಪಾಲಂಕಾರ ವೀಕ್ಷಿಸುವಲ್ಲಿ ಜಾಗ್ರತೆ ಅಗತ್ಯ
ಈ ಬಾರಿ ಹೆಚ್ಚಿನ ಮೆರಗು:
ಸೆಸ್ಕ್ ವತಿಯಿಂದ ಕಳೆದ ವರ್ಷ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ದಸರಾ ಸಂಭ್ರಮಕ್ಕೆ ಹೊಸ ಮೆರಗು ನೀಡಿತ್ತು. 1500 ಡ್ರೋನ್‌ಗಳ ಮೂಲಕವಾಗಿ ನಡೆಸಲಾಗಿದ್ದ ಪ್ರದರ್ಶನದಲ್ಲಿ ಆಗಸದಲ್ಲಿ ವಿವಿಧ ವಿನ್ಯಾಸಗಳ 15ಕ್ಕೂ ಹೆಚ್ಚು ಬೆಳಕಿನ ಚಿತ್ತಾರಗಳನ್ನು ಮೂಡಿಸಲಾಗಿತ್ತು.
3000 ಡ್ರೋನ್‌ಗಳ ಬಳಕೆ:
ಡ್ರೋನ್ ಪ್ರದರ್ಶನಕ್ಕೆ ಮೊದಲ ಪ್ರಯತ್ನದಲ್ಲಿ ದೊರೆತ ಯಶಸ್ಸಿನ ಹಿನ್ನೆಲೆಯಲ್ಲಿ ಈ ಬಾರಿಯ ಪ್ರದರ್ಶನವನ್ನು ಮತ್ತಷ್ಟು ಆಕರ್ಷಣೀಯವಾಗಿ ಮಾಡಲು ಸೆಸ್ಕ್ ಸನ್ನದ್ಧವಾಗಿದೆ. ಈ ವರ್ಷದ ಡ್ರೋನ್ ಶೋನಲ್ಲಿ 3000 ಡ್ರೋನ್‌ಗಳನ್ನು ಬಳಸಿಕೊಂಡು ಪ್ರದರ್ಶನ ನೀಡಲಾಗುತ್ತಿದೆ. ಹೀಗಾಗಿ ಈ ಬಾರಿಯ ಡ್ರೋನ್ ಶೋ ಹೊಸತನ ಹಾಗೂ ಅತ್ಯಾಕರ್ಷಕವಾಗಿರಲಿದ್ದು, ನೋಡುಗರಿಗೆ ವಿಶಿಷ್ಟ ಅನುಭವವನ್ನು ನೀಡಲಿದೆ.
ಈ ಬಗ್ಗೆ ಮಾತನಾಡಿದ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು , “ಕಳೆದ ವರ್ಷ ಎಲ್ಲರನ್ನು ರಂಜಿಸಿದ್ದ ಡ್ರೋನ್ ಪ್ರದರ್ಶನ ಈ ಬಾರಿ ನಾಲ್ಕು ದಿನಗಳು ನಡೆಯಲಿದೆ. ಈ ಬಾರಿಯ ಪ್ರದರ್ಶನ ಹೆಚ್ಚು ಆಕರ್ಷಣೆಯಿಂದ ಕೂಡಿರಲಿದೆ. 3000 ಡ್ರೋನ್‌ಗಳನ್ನು ಬಳಸಿಕೊಂಡು ನೀಡಲಾಗುವ ಈ ಬಾರಿಯ ಪ್ರದರ್ಶನ ಪ್ರೇಕ್ಷಕರಿಗೆ ರೋಮಾಂಚನಕಾರಿ ಅನುಭವ ನೀಡಲಿದೆ ಎಂದರು.
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…