ನಮ್ಮ ಮೈಸೂರ ದಸರಾ 2025

ರಂಗೇರಿದ ಮೈಸೂರು ದಸರಾ ಮಹೋತ್ಸವ: ಜಿಲ್ಲಾಡಳಿತದಿಂದ ರಾಜಮನೆತನಕ್ಕೆ ಅಧಿಕೃತ ಆಹ್ವಾನ‌.

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದ್ದು, ಇಂದು ಜಿಲ್ಲಾಡಳಿತದಿಂದ ರಾಜಮನೆತನಕ್ಕೆ ಅಧಿಕೃತ ಆಹ್ವಾನ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಅರಮನೆಗೆ ಭೇಟಿ ನೀಡಿದ ಜಿಲ್ಲಾಡಳಿತವು ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಅವರಿಗೆ ದಸರಾಗೆ ಅಧಿಕೃತ ಆಹ್ವಾನ ನೀಡಿತು. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಸ್ವಾಭಿಮಾನ ಬದುಕಿಗೆ ಶಿಕ್ಷಣವೇ ಮದ್ದು : ಸಿಎಂ ಸಿದ್ದರಾಮಯ್ಯ 

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ರಾಜ ಮನೆತನಕ್ಕೆ ಸಾಂಪ್ರದಾಯಿಕ ಸ್ವಾಗತ ಕೋರಲಾಗಿದೆ. ನಗುಮೊಗದಿಂದ ನಮ್ಮನ್ನು ಬರಮಾಡಿಕೊಂಡರು. ಅವರೂ ಎಂದಿಗೂ ಕಿರಿಕಿರಿ ಮಾಡಿಲ್ಲ. ನಾಡಹಬ್ಬ ಯಶಸ್ಸಿಗೆ ಸಹಕಾರ ಕೊಡುವುದಾಗಿ ಹೇಳಿದ್ದಾರೆ. ಕೆಲ ಸಲಹೆಗಳನ್ನು ನೀಡಿದ್ದಾರೆ. ಕಳೆದ ಬಾರಿ ಆರಮನೆ ಆವರಣದಲ್ಲಿ ಆಸನ ವ್ಯವಸ್ಥೆ ಹೆಚ್ಚಾಗಿ ಮಾಡಲಾಗಿತ್ತು. ಮಳೆ ಬಂದಾಗ ಕೆಲ ತೊಂದರೆಗಳು ಉಂಟಾಗಿದ್ದವು. ಈ ಬಾರಿ ಅವರ ಸಲಹೆಯಂತೆ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ. ದಸರಾ ಚೆನ್ನಾಗಿ ನಡೆಯಲಿ ಎಂಬುದನ್ನು ಹೊರತುಪಡಿಸಿ ಬೇರೆನೂ ಹೇಳಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

15 mins ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

51 mins ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

2 hours ago

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

6 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

6 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

6 hours ago