ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು, 11 ದಿನದ ಮೈಸೂರು ದಸರಾಗೆ ಅತೀ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಈ ಬಾರಿಯ ಜಂಬೂಸವಾರಿಯಲ್ಲಿ 15 ಲಕ್ಷ ಜನರು ಭಾಗಿಯಾಗಿಯಾಗುವ ನಿರೀಕ್ಷೆಯಿದೆ. ಅರಮನೆಯಲ್ಲಿ 48 ಸಾವಿರ, ಬನ್ನಿಮಂಟಪದಲ್ಲಿ 32 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು.
ಇನ್ನು ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಸಹಾಯ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ. ಇನ್ನು ಸುಗಮ ಸಂಚಾರಕ್ಕಾಗ ಮಾರ್ಗಗಳನ್ನು ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಸುಂದರ್ ರಾಜ್, ಬಿಂದು ಮಣಿ ಭಾಗಿಯಾಗಿದ್ದರು.





