dasara
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಜಗತ್ಪ್ರಸಿದ್ಧ ಮೈಸೂರು ಅರಮನೆ ಅಂಗಳದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿಶ್ವವಿಖ್ಯಾತ ದಸರಾ ಮಹೋತ್ಸದಲ್ಲಿ ಮಹಿಳೆಯರಿಗೂ ಅದ್ಯತೆ ನೀಡುವ ಹಿನ್ನಲೆಯಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಮಹಿಳೆಯರಲಿನ ಕಲೆಗಳ ಪ್ರದರ್ಶನದ ಜೊತೆಗೆ ಸಂಸ್ಕೃತಿಯನ್ನು ಉಳಿಸಿ ಬೆಳಸಲು ಈ ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು
ಮಹಿಳಾ ದಸರಾ ಉಪಸಮಿತಿ ವತಿಯಿಂದ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಮಹಿಳಾ ಸ್ಪರ್ಧಿಗಳು ವಿಧ ವಿಧದ ರಂಗೋಲಿ ಬಿಡಿಸಿದರು. ಗಣೇಶನ ಚಿತ್ತಾರ, ಅಂಬಾರಿ ಹೊತ್ತ ಆನೆ, ನವಿಲಿನ ಚಿತ್ತಾರ ಸೇರಿದಂತೆ ಅನೇಕ ಚಿತ್ರಗಳನ್ನು ಬಿಡಿಸಿ ಸ್ಪರ್ಧೆಯಲ್ಲಿ ಭಾಗಿಯಾಗಿ ಸಂತಸ ವ್ಯಕ್ತಪಡಿಸಿದ್ದಾರೆ.
ಎಂಟು ವರ್ಷಗಳ ಕಾಲ ಚಿನ್ನದ ಅಂಬಾರಿ ಹೊತ್ತ ಅರ್ಜುನನ ನೆನಪಿಗಾಗಿ ರಂಗೋಲಿ ಮುಖಾಂತರ ಚಿತ್ತಾರ ಬಿಡಿಸಲಾಗಿದೆ. ಇದು ಎಲ್ಲರ ಪ್ರಶಂಸೆಗೆ ಒಳಪಟ್ಟಿದೆ ಎಂದು ಕಲಾವಿದ ಪುನೀತ್ ಹೇಳಿದರು.
ಇನ್ನು ದಸರಾ ಮಹೋತ್ಸವದಲ್ಲಿ ಗ್ರಾಮೀಣ ಭಾಗದ ಮಹಿಳೆಯರಿಗೆ ಅವಕಾಶ ನೀಡಿರುವುದು ತುಂಬಾ ಸಂತೋಷ ತಂದಿದೆ. ನಮ್ಮ ಕಲೆಗಳ ಪ್ರದರ್ಶನಕ್ಕೆ ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಗ್ರಾಮೀಣ ಭಾಗದ ಮಹಿಳೆ ಜ್ಯೋತಿ ಹೇಳಿದರು.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…