ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್ ಆರಂಭವಾಗಿದೆ.
ದರ್ಬಾರ್ ಹಾಲ್‌ನಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಪಡೆಯರ್ ಅವರು ಪೂಜಾ ಕೈಂಕರ್ಯ ನೆರವೇರಿಸಿದ್ದು, ಗುಲಾಬಿ ಬಣ್ಣದ ರಾಜಪೋಷಾಕಿನಲ್ಲಿ ಕಂಗೊಳಿಸುತ್ತಿದ್ದಾರೆ. ತಲೆಗೆ ನೇರಳೆ ಬಣ್ಣದ ಪೇಟ ಧರಿಸಿ ಪೂಜೆಯಲ್ಲಿ ಭಾಗಿಯಾಗಿದ್ದ ಯದುವೀರ್ ಒಡೆಯರ್ ಅವರು, ರತ್ನಖಚಿತ ಸಿಂಹಾಸನವೇರಿ ದರ್ಬಾರ್ ನಡೆಸುತ್ತಿದ್ದಾರೆ.





