Mysore
24
clear sky

Social Media

ಮಂಗಳವಾರ, 20 ಜನವರಿ 2026
Light
Dark

ಯಶಸ್ವಿ ದಸರಾ ಆಯೋಜನೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಸಿಎಂ

ಮೈಸೂರು : ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಸ್ವಾಗತಿಸುವುದಾಗಿ ತಿಳಿಸಿದರು. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದರು.

ಇದನ್ನು ಓದಿ : ಮೈಸೂರು ದಸರಾ: ಆರನೇ ಬಾರಿ ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯು

ದಸರಾ ಯಶಸ್ವೀ ಆಯೋಜನೆ ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

Tags:
error: Content is protected !!