ನಮ್ಮ ಮೈಸೂರ ದಸರಾ 2025

ಜಂಬೂ ಸವಾರಿಯಲ್ಲಿ ಸಾಗಿದ ಸ್ತಬ್ಧಚಿತ್ರ ಮಾದರಿಯ ವಿಶೇಷತೆಗಳು

Mysuru Dasara | 58 ಸ್ತಬ್ದಚಿತ್ರಗಳು, 150ಕ್ಕೂ ಹೆಚ್ಚು ಕಲಲಾತಂಡಗಳ ಮೆರಗು

ಮೈಸೂರು : ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಸಾಗುತ್ತಿದೆ. ಮೆರವಣಿಗೆ ದಾರಿಯಲ್ಲಿ ಸಾಗುತ್ತಿರುವ ಸ್ತಬ್ಧಚಿತ್ರಗಳು ಕರ್ನಾಟಕದ ಸಂಸ್ಕೃತಿ, ಇತಿಹಾಸ, ಪ್ರಕೃತಿ, ಮತ್ತು ಸಾಧನೆಗಳನ್ನು ಜನರಿಗೆ ಪರಿಚಯಿಸುತ್ತಿವೆ. ಈ ಸ್ತಬ್ಧಚಿತ್ರಗಳು ಪ್ರತಿ ವರ್ಷ ವಿವಿಧ ಜಿಲ್ಲೆಗಳು ಮತ್ತು ಇಲಾಖೆಗಳಿಂದ ತಯಾರಿಸಲ್ಪಡುತ್ತವೆ, ಅಲ್ಲಿನ ವೈಶಿಷ್ಟ್ಯಗಳನ್ನು ಆಕರ್ಷಕವಾಗಿ ಪ್ರದರ್ಶಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮತ್ತು ಮಾಹಿತಿ ನೀಡುತ್ತಿವೆ.

ಜಂಬೂಸವಾರಿಯಲ್ಲಿ 58 ಸ್ತಬ್ದಚಿತ್ರಗಳು ಸೇರಿ 150 ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಿವೆ.

ನಿಶಾನೆ ಆನೆಗಳು ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಪುಷ್ಟಿ‌ ನೀಡುವಂತೆ ಸಾಗಿದ್ದು, ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಿಂದ ಆತ್ಮನಿರ್ಭರ ಭಾರತವನ್ನು ಮುನ್ನಡೆಸುತ್ತಿದೆ ರಕ್ಷಣಾ ಚಲನಶೀಲತೆಯಲ್ಲಿ, ಭಾರತೀಯ ರೈಲ್ವೆ ಇಲಾಖೆಯಿಂದ ಚಿನಾಬ್ ಸೇತು ಹಾಗೂ ಪಂಬನ್ ಸೇತು, ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಭೋವಿ ಸಮುದಾಯದವರನ್ನು ಆರ್ಥಿಕವಾಗಿ ಸ್ವಾವಲಂಣಗಳನ್ನಾಗಿ ಮಾಡಲು ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳು, ಮಂಡ್ಯ ಜಿಲ್ಲೆಯಿಂದ “ಸ್ವಾತಂತ್ರ‍್ಯ ಹೋರಾಟದ ದೀಪ-ಶಿವಪುರದ ಧ್ವಜ ಸತ್ಯಾಗ್ರಹ”, ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಜ್ಞಾನಿ -ವಿಜ್ಞಾನಿಗಳ ನಾಡು, ನಗರಾಭಿವೃದ್ಧಿ ಇಲಾಖೆಯಿಂದ ಸ್ಮಾರ್ಟ್, ಶುದ್ದ ಕಾಳಜಿಯ ನಗರಗಳು, ಮೈಸೂರು ಮಹಾನಗರ ಪಾಲಿಕೆಯಿಂದ ಸ್ವಾಸ್ಥ್ಯ ಮತ್ತು ಸುಸ್ಥಿರ ಮೈಸೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ಕುರಿತು ಮೆರವಣಿಗೆಯಲ್ಲಿ ಕಲಾ ತಂಡಗಳೊಂದಿಗೆ ಒಂದರ ಹಿಂದೆ ಒಂದರಂತೆ ಸಾಗಿತು.

ಇದನ್ನು ಓದಿ : ಮೈಸೂರು ದಸರಾ: ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ

ಧಾರವಾಡ ಜಿಲ್ಲೆಯಿಂದ ರಾಷ್ಟ್ರದ ತಯಾರಿಕಾ ಕೇಂದ್ರ ಗರಗ ಕಲಘಟಗಿ ಬಣ್ಣದ ತೊಟ್ಟಿಲು ಮತ್ತು ನವಲಗುಂದ ಜಮಖಾನ”, ಉತ್ತರ ಕನ್ನಡ ಜಿಲ್ಲೆಯಿಂದ ರಾಣಿ ಚೆನ್ನಭೈರದೇವಿ ಮಸಾಲೆ ರಾಣೆ, ಬಾಗಲಕೋಟೆ ಜಿಲ್ಲೆಯಿಂದ ಕೂಡಲಸಂಗಮ ಮತ್ತು ಶಿಲ್ಪಕಲೆಗಳ ನಾಡು, ಕೊಪ್ಪಳ ಜಿಲ್ಲೆಯಿಂದ ಕಿನ್ನಾಳ ಕಲೆ, ಶಿವಮೊಗ್ಗ ಜಿಲ್ಲೆಯಿಂದ ಕೇದಾರೇಶ್ವರ ದೇವಸ್ಥಾನ ಬಳ್ಳಿಗಾವಿ, ಬಳ್ಳಾರಿ ಜಿಲ್ಲೆಯಿಂದ ಸೆಪ್ಟೆಂಬರ್ ನಲ್ಲಿ ಸಂಡೂರು ನೋಡು, ವಿಜಯಪುರ ಜಿಲ್ಲೆಯಿಂದ ಶಿವನ ಪ್ರತಿಮೆ ಶಿವಗಿರಿ ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತಿಬಿಂಬಿಸುವ ಕಲೆ ದೈವಾರಾಧನೆ ಹಾಗೂ ಸಾಂಪ್ರದಾಯಿಕ ಕ್ರೀಡೆ, ಕಲಬುರಗಿ ಜಿಲ್ಲೆಯಿಂದ ಶರಣಬಸವೇಶ್ವರ ಸಂಸ್ಥಾನ, ಮಾಹಾದಾಸೋಹಿ ಪೀಠ ಮತ್ತು ಬಹುಮನಿ ಸುಲ್ತಾನ ಸಾಮ್ರಾಜ್ಯ, ತುಮಕೂರು ಜಿಲ್ಲೆಯಿಂದ “ನವ್ಯ ಮತ್ತು ಪ್ರಾಚೀನ ಶಿಲ್ಪ ಕಲಾ ಸಂಕೀರ್ಣ ನಮ್ಮ ತುಮಕೂರು ಜಿಲ್ಲೆ”,

ಉಡುಪಿ ಜಿಲ್ಲೆಯಿಂದ ಸ್ವಚ್ಛ ಉಡುಪಿ, ಕೊಡಗು ಜಿಲ್ಲೆಯಿಂದ ಕೊಡಗಿನ ಚಾರಣ ಪಥಗಳು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ಅಭೂತಪೂರ್ವ ಸಾಧನ, ಹಾವೇರಿ ಜಿಲ್ಲೆಯಿಂದ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮೈಲಾರ ಮಹದೇವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಘಾಟಿ ಸುಬ್ರಮಣ್ಯ ದೇವಸ್ಥಾನ, ದೇವನಹಳ್ಳಿ ಕೋಟೆ ಮತ್ತು ಕೆಂಪೇಗೌಡರ ವಿಗ್ರಹ, ಚಿಕ್ಕಮಗಳೂರು ಜಿಲ್ಲೆಯಿಂದ ಭದ್ರಬಾಲ್ಯ ಯೋಜನೆ ಚಿಕ್ಕಮಗಳೂರು ಜಿಲ್ಲೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ -ಕರ್ನಾಟಕದಿಂದ ಡ್ರಗ್ಸ್ ಮುಕ್ತ ಕ್ಯಾಂಪಸ್ ಅಭಿಯಾನ, ಗದಗ ಜಿಲ್ಲೆಯಿಂದ ಜೋಡು ಕಳಸದ ಗುಡಿ, ಬೆಂಗಳೂರು ದಕ್ಷಿಣ ಜಿಲ್ಲೆ (ರಾಮನಗರ)ದಿಂದ ಚನ್ನಪಟ್ಟಣ ಗೊಂಬೆ, ಹೈನುಗಾರಿಕೆ ರೇಷ್ಮೆ, ಮೈಸೂರು ಜಿಲ್ಲೆಯಿಂದ ಬದನವಾಳು ನೂಲುವ ಪ್ರಾಂತ್ಯ, ಬೆಂಗಳೂರು ನಗರ ಜಿಲ್ಲೆಯಿಂದ ಬ್ರಾಂಡ್ ಬೆಂಗಳೂರಿನತ್ತ ದಿಟ್ಟ ಹೆಜ್ಜೆ, ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಿಂದ ಶುದ್ಧ ಇಂಧನ ಮತ್ತು ಸಂಪನ್ಮೂಲ ಸಂರಕ್ಷಣೆಯ ಮೂಲಕ ಗ್ರಾಮೀಣ ಭಾರತದ ಸಶಕ್ತೀಕರಣ, ಚಾಮರಾಜನಗರ ಜಿಲ್ಲೆಯಿಂದ ಪ್ರಕೃತಿಯ ಸೌರ್ಹದತೆಯೊಂದಿಗೆ ಪ್ರಗತಿಯತ್ತ ಸಾಗೋ,

ಬೆಳಗಾವಿ ಜಿಲ್ಲೆಯಿಂದ ಶ್ರೀ ಮಹಾಕಾಳಿ ಮಾಯಕ್ಕಾ ದೇವಿ ದೇವಸ್ಥಾನ ಚಿಂಚಲಿ, ವಿಜಯನಗರ ಜಿಲ್ಲೆಯಿಂದ ವಿಶಿಷ್ಟ ವಿಜಯನಗರ-ವಿಜಯನಗರ ಜಿಲ್ಲೆಯ ವೈಶಿಷ್ಟ್ಯತೆಗಳು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಜ್ಞಾನವೇ ದಿವ್ಯಜ್ಯೋತಿ (ಸಮಾಜ ಕಲ್ಯಾಣ ಇಲಾಖೆ), ಹಾಸನ ಜಿಲ್ಲೆಯಿಂದ ಗೊಮ್ಮಟೇಶ್ವರ – ಕಾಫಿ, ಬೀದರ್ ಜಿಲ್ಲೆಯಿಂದ ಬೀದರ ಕೊಟೆ, ದಾವಣಗೆರೆ ಜಿಲ್ಲೆಯಿಂದ ಮನೆ ಮನೆಗೆ ಗಂಗೆ, ಚಿತ್ರದುರ್ಗ ಜಿಲ್ಲೆಯಿಂದ ರಾಜವೀರ ಮದಕರಿ ನಾಯಕ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಭವ್ಯ ಭವಿಷ್ಯ ನಿರ್ಮಿಸುವ ಕಾರ್ಯಪರಿಸರ, ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಉದ್ಯೋಗವಕಾಶ ಮತ್ತು ಸ್ವಾವಲಂಬನೆ, ಕಾರ್ಮಿಕ ಇಲಾಖೆಯಿಂದ ಇಲಾಖಾ ಕಾರ್ಯಕ್ರಮಗಳು, ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಕೌಶಲ್ಯ ಅಭಿವೃದ್ಧಿ ಯೋಜನೆಯಿಂದ ಚರ್ಮ ಕುಶಲಕರ್ಮಿಗಳ/ಚರ್ಮಗಾರಿಕೆಯ ಇತಿಹಾಸ, ಕಾವೇರಿ ನೀರಾವರಿ ನಿಗಮ (ನಿ.) ಮೈಸೂರುನಿಂದ ಕರುನಾಡಿನ ಜೀವನಾಡಿ ನದಿಗಳಿಂದ ಸಮೃದ್ಧವಾದ ಕರುನಾಡು, ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮದಿಂದ ಕರ್ನಾಟಕದ ಹೆಮ್ಮೆಯ ಸಂಕೇತ ಮೈಸೂರು ರೇಷ್ಮೆ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಇಲಾಖಾ ಕಾರ್ಯಕ್ರಮಗಳು, ಕರ್ನಾಟಕ ಹಾಲು ಮಹಾಮಂಡಳಿ ನಿ. (ಕೆ.ಎಂ.ಎಫ್)ನಿಂದ ನಂದಿನಿ ಹಾಲಿನ ಶುಭ್ರತೆ… ನೀಡಿದೆ ರೈತ ಪರಿವಾರಕ್ಕೆ ಭದ್ರತೆ ಮತ್ತು ಹೈನೋದ್ಯಮದ ಮೂಲಕ ಮಹಿಳಾ ಸಬಲೀಕರಣ,

ಇದನ್ನು ಓದಿ : ಮೈಸೂರು ದಸರಾ: ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ ವೀಕ್ಷಿಸಿದ ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಡಾ||ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟರ ಸಮಗ್ರ ಅಭಿವೃದ್ಧಿ – ನಮ್ಮ ಧ್ಯೇಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇಲಾಖಾ ಕಾರ್ಯಕ್ರಮಗಳು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ ಕರ್ನಾಟಕ ತಾಂಡಾ ಅಭಿವೃದಿ ನಿಗಮ ಸ್ಥಾಪನೆಯ ಧೈಯೋದ್ದೇಶಗಳು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಾಯಚೂರು ಜಿಲ್ಲೆಯಿಂದ ಸರ್ವ ಧರ್ಮ ಸಾಮರಸ್ಯದ ನೆಲೆಬೀಡು, ರಾಯಚೂರು, ಕೋಲಾರ ಜಿಲ್ಲೆಯಿಂದ “ರೇಷ್ಮೆ, ಹೈನುಗಾರಿಕೆ ಮತ್ತು ಮಾವು”, ಯಾದಗಿರಿ ಜಿಲ್ಲೆಯಿಂದ ಟೇಲರ್ ಮಂಜಿಲ್ – 1844 ಸುರಪುರ, ಪ್ರವಾಸೋದ್ಯಮ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ, ಅಖಿಲ ಭಾರತ್ ವಾಕ್ ಮತ್ತು ಶ್ರವಣ ಸಂಸ್ಥೆಯಿಂದ “ಕಲಿಕಾ ನ್ಯೂನತೆ”, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜ್ಞಾನವೇ ಶಕ್ತಿ, ಶಿಕ್ಷಣವೇ ಆಸ್ತಿ ಎಂಬುದೇ ಸಂಸ್ಥೆಯ ಪರಮ ಧೈಯ ಬುದ್ಧಿವಂತಿಕೆ, ಸಮಾನತೆ, ಭರವಸೆಗಳೇ ಇಲಾಖೆಯ ಮೊದಲ ಆದ್ಯತೆ ನೀಡಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

9 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

52 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

1 hour ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

2 hours ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

3 hours ago