ನಮ್ಮ ಮೈಸೂರ ದಸರಾ 2025

ರಾಷ್ಟ್ರೀಯ ಭಾವೈಕ್ಯತೆ, ಕನ್ನಡ ವೈಭವಕ್ಕೆ ಸಾಕ್ಷಿಯಾದ ಮೂರನೇ ದಿನದ ಯುವ ಸಂಭ್ರಮ

ಮೈಸೂರು : ಸಂವಿಧಾನದ ಮಹತ್ವ, ದೇಶದ ಯೋಧರ ಕೆಚ್ಚೆದೆಯ ಹೋರಾಟ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕನ್ನಡ ವೈಭವಕ್ಕೆ ಸಾಕ್ಷಿಯಾಗಿದ್ದು ದಸರಾ ಮಹೋತ್ಸವದ ಆಕರ್ಷಣಿಯ ಕೇಂದ್ರವಾದ ಯುವ ಸಂಭ್ರಮ. ಇವೆಲ್ಲವೂ ಮೂರನೇ ದಿನದ ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯದಲ್ಲಿ ಅನಾವರಣ ಗೊಂಡವು.

ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಶುಕ್ರವಾರ ಸಂಜೆ ನಡೆದ ಸಾಂಸ್ಕೃತಿಕ ಹಬ್ಬ ಯುವ ಜನತೆಯಲ್ಲಿ ನಾಡು-ನುಡಿಯ ಬಗ್ಗೆ ಅಭಿಮಾನದೊಂದಿಗೆ ದೇಶ ಭಕ್ತಿಯ ಕಿಚ್ಚನ್ನು ಹಚ್ಚುವಂತೆ ಮಾಡಿತು.

ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯ ಸ್ಮರಣೆ, ಕನ್ನಡ ನಾಡು ನುಡಿ, ರಾಷ್ಟ್ರೀಯ ಭಾವೈಕ್ಯತೆಯ ಜಪ, ಭಾರತೀಯ ಯೋಧರ ಸ್ಮರಣೆಯೊಂದಿಗೆ ಜೈ ಜವಾನ್, ಜೈ ಕಿಸಾನ್ ಘೋಷಣೆಗಳು ಮೊಳಗಿದವು. ಬೆಂಗಳೂರು ಕೆಂಗೇರಿ ಸರ್ಕಾರಿ ಪ್ರಥಮ ದರ್ಜೆ ಪರಿಸರ ಸಂರಕ್ಷಣೆ ಎಂಬ ನೃತ್ಯಕ್ಕೆ ಹೆಜ್ಜೆ ಹಾಕಿದರು, ಮೈಸೂರು ಹಿನಕಲ್ ಮೈಸೂರು ರೂರಲ್ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಮೈಸೂರು ರಾಜರ ಕೊಡುಗೆಯ ಬಗ್ಗೆ ತಿಳಿಸಿದರು, ಹುಣಸೂರು ಟ್ಯಾಲೆಂಟ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪೌರಾಣಿಕ ನೃತ್ಯ ಎಲ್ಲರೂ ಗಮನ ಸೆಳೆದರೆ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿಗಳು ಭಾರತೀಯ ಸಾಂಸ್ಕೃತಿಕ ನೃತ್ಯಕ್ಕೆ ಹೆಜ್ಜೆ ಹಾಕಿದರು.

ಕಾರ್ಯಕ್ರಮದಲ್ಲಿ 59 ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ಅಯೋಧ್ಯ ಶ್ರೀರಾಮ ಶಿಲ್ಪಿ ಮೈಸೂರಿನ ಹೆಮ್ಮೆಯ ಅರುಣ್ ಯೋಗಿರಾಜ್, ಮೈಸೂರು ದಸರಾ ವೈಭವ ಅಂದು ಇಂದು, ದೇಶ ಕಾಯುವ ಯೋಧನ ಬಗ್ಗೆ, ಸರ್ಕಾರದ ಗ್ಯಾರಂಟಿ ಯೋಜನೆಗಳು ಹೀಗೆ ನಾನಾ ಕಾಲೇಜು ತಂಡಗಳು ಕನ್ನಡ ನಾಡು ನುಡಿ ಯೊಂದಿಗೆ ಕರ್ನಾಟಕದ ಜಾನಪದ ವೈವಿಧ್ಯತೆ ಮತ್ತು ಪರಂಪರೆಯನ್ನು ಬಿಂಬಿಸುವ ನೃತ್ಯಗಳನ್ನು ಮಾಡುವ ಮೂಲಕ ಗಮನ ಸೆಳೆದವು.

ಆಂದೋಲನ ಡೆಸ್ಕ್

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

51 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

5 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

8 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

8 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

13 hours ago