ನಮ್ಮ ಮೈಸೂರ ದಸರಾ 2025

ಮೈಸೂರಿನಲ್ಲಿ ವಿಂಟೇಜ್ ಕಾರುಗಳ ಹವಾ

ಮೈಸೂರು: ಮೈಸೂರಿನಲ್ಲಿ ಒಂದು ಕಡೆ ದಸರಾ ಮಹೋತ್ಸವ ಕಾರ್ಯಕ್ರಮಗಳು ಜನರನ್ನು ಅಕರ್ಷಣೆ ಮಾಡಿದ್ರೆ ಮತ್ತೊಂದು ಕಡೆ ವಿಂಟೇಜ್ ಕಾರುಗಳು ಎಲ್ಲರನ್ನು ಅಕರ್ಷಣೆ ಮಾಡುತ್ತಿದೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ಗೋಪಿನಾಥ್ ಅವರು ಕಳೆದ 4 ವರ್ಷದಿಂದ ವಿಂಟೇಜ್ ಕಾರುಗಳನ್ನು ಪ್ರದರ್ಶನ ಮಾಡಿಕೊಂಡು ಬರುತ್ತಿದ್ದಾರೆ.

ಇದನ್ನು ಓದಿ : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೃಹತ್ ಕೇಕ್ ಶೋ ಆಯೋಜನೆ

ಈ ವರ್ಷ ಸುಮಾರು 50ಕ್ಕೂ ಹೆಚ್ಚಿನ ಅಪರೂಪದ ಕಾರುಗಳು 40ಕ್ಕೂ ಹೆಚ್ಚಿನ ಬೈಕ್‌ಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ. ಸೆಪ್ಟೆಂಬರ್ 26ರವರೆಗೆ ಈ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರಿಗೆ ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

1909 ರಿಂದ 1970 ರವರೆಗಿನ ವಿಂಟೇಜ್ ಕಾರುಗಳನ್ನು ಪ್ರದರ್ಶನ ಮಾಡಲಾಗಿದ್ದು, ವಿಶೇಷವಾಗಿ ಜಿಪಿಡಬ್ಲೂ, ಯುಎಸ್ ಆರ್ಮಿ ಟ್ರಕ್, 1970ರ ಲ್ಯಾಂಡ್ ರೋವರ್ ಸರಣಿ 3, 1949 ರ ಬೆಡ್ ಫೋರ್ಡ್ 1937 ಮರ್ಸಿಡಿಸ್ ಬೆಂಜ್ ವೋಕ್ಸ್ ವ್ಯಾಗನ್ ಬೀಟಲ್ ಸೇರಿದಂತೆ 40ಕ್ಕೂ ಹೆಚ್ಚಿನ ಹಳೆಯ ಪ್ರಮುಖ ಬೈಕ್‌ಗಳನ್ನು ಪ್ರದರ್ಶನಕ್ಕಿಡಲಾಗಿದೆ.

ಈ ವಿಂಟೇಜ್ ಕಾರುಗಳ ಪ್ರದರ್ಶನವನ್ನು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಉದ್ಘಾಟನೆ ಮಾಡಿದರು. ನಂತರ ಅಪರೂಪದ ಹಳೆಯ ಕಾರುಗಳನ್ನು ಅರುಣ್‌ ಯೋಗಿರಾಜ್ ಅವರು ಚಾಲನೆ ಮಾಡಿ ಖುಷಿಪಟ್ಟರು.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago