ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಜಂಬೂಸವಾರಿ ರಿಹರ್ಸಲ್

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ಆವರಣದಲ್ಲಿ ಜಂಬೂಸವಾರಿ ರಿಹರ್ಸಲ್‌ ನಡೆಸಲಾಯಿತು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರು ಅರಮನೆ ಆವರಣದಲ್ಲಿ ದಸರಾ ಆನೆಗಳು ಹಾಗೂ ಅಶ್ವಾರೋಹಿ ಪಡೆಗೆ ರಿಹರ್ಸಲ್‌ ನಡೆಸಲಾಯಿತು.

ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಅರಣ್ಯಾಧಿಕಾರಿ ರವಿಶಂಕರ್ ಹಾಗೂ ಡಿಸಿಎಫ್‌ ಡಾ.ಪ್ರಭುಗೌಡ ಅವರು ಅಭಿಮನ್ಯುವಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಇದನ್ನು ಓದಿ : ದಸರಾ: ಜಂಬೂ ಸವಾರಿಯತ್ತ ಜನರ ಚಿತ್ತ

ಜಂಬೂಸವಾರಿ ಮೆರವಣಿಗೆಯಲ್ಲಿ ಆನೆಗಳು, ಅಶ್ವರೋಹಿ ದಳದ ಕುದುರೆಗಳು, ಪೊಲೀಸ್ ಬ್ಯಾಂಡ್ ಸಾಗಿದ್ದು, 21 ಬಾರಿ ಕುಶಾಲತೋಪು ಸಿಡಿಸಿ, ರಾಷ್ಟ್ರಗೀತೆಗೆ ಗೌರವ ಸಲ್ಲಿಕೆ ಮಾಡಲಾಯಿತು.

ನಿಶಾನೆ ಆನೆಯಾಗಿ ಮೊದಲಿಗೆ ಧನಂಜಯ ಹೆಜ್ಜೆ ಹಾಕಿದ್ದು, ನೌಪತ್ ಆನೆಯಾಗಿ ಗೋಪಿ ಹೆಜ್ಜೆ ಹಾಕಿದನು. ಮೊದಲ ಹಂತದ ಸಾಲಾನೆಯಲ್ಲಿ ಮಹೇಂದ್ರ, ಶ್ರೀಕಂಠ, ಲಕ್ಷ್ಮಿ ಆನೆಗಳು ಹೆಜ್ಜೆ ಹಾಕಿದ್ದು, ಎರಡನೇ ಹಂತದಲ್ಲಿ ಕಂಜನ್, ಭೀಮ, ಏಕಲವ್ಯ ಹೆಜ್ಜೆ ಹಾಕಿದವು.

ಮೂರನೇ ಹಂತದಲ್ಲಿ ಪ್ರಶಾಂತ, ಸುಗ್ರೀವ, ಹೇಮಾವತಿ ಆನೆಗಳು ಹೆಜ್ಜೆ ಹಾಕಿದ್ದು, ಕ್ಯಾಪ್ಟನ್ ಅಭಿಮನ್ಯುವಿನ ಜೊತೆ ಕುಮ್ಕಿ ಆನೆಗಳಾಗಿ ಕಾವೇರಿ, ರೂಪ ಆನೆಗಳು ಹೆಜ್ಜೆ ಹಾಕಿದವು.

ಆಂದೋಲನ ಡೆಸ್ಕ್

Recent Posts

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

4 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

18 mins ago

ಪ್ರವಾಸಿಗರ ಆಕರ್ಷಣೆಯ ಭದ್ರದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

50 mins ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

1 hour ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

5 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

5 hours ago