ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು, ದಸರಾ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಗಾಜಿನ ಮನೆಯ ಗಾಂಧಿ ಮಂಟಪದಲ್ಲಿ ಹಸಿರು ಟೇಪ್ ಕತ್ತರಿಸಿ ಉದ್ಘಾಟನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಮಹದೇವಪ್ಪ, ಶಾಸಕ ಹರೀಶ್ ಗೌಡ, ರವಿಶಂಕರ್, ಸಂಸದ ಸುನೀಲ್ ಬೋಸ್ ಸಾಥ್ ನೀಡಿದರು.

ಮೈಸೂರಿನ ಕುಪ್ಪಣ್ಣ ಪಾರ್ಕ್‌‌ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಕನ್ಯಾಕುಮಾರಿಯ ಗಾಂಧಿ ಮ್ಯೂಸಿಯಂ ಮಾದರಿ ನಿರ್ಮಾಣ ಮಾಡಲಾಗಿದೆ. 25ಕ್ಕೂ ಹೆಚ್ಚು ಬಗೆಯ ಲಕ್ಷಾಂತರ ಹೂಗಳಿಂದ ವಿವಿಧ ಕಲಾಕೃತಿಗಳು ಅರಳಿದ್ದು, ಆಪರೇಷನ್ ಸಿಂಧೂರ ನೆನಪಿಸುವ ಕಲಾಕೃತಿಗಳು ನೋಡುಗರ ಗಮನಸೆಳೆಯುತ್ತಿವೆ.

ಭಾರತೀಯ ವಾಯುಪಡೆ, ಭೂಸೇನೆ, ನೌಕಾಪಡೆ ಮಾಡೆಲ್‌ ಬಣ್ಣಬಣ್ಣದ ಹೂಗಳಿಂದ ಅರಳಿದ್ದು, ಭಾರತೀಯ ಸೇನೆಯ ಹೆಮ್ಮೆ S400 ಕಲಾಕೃತಿ ರಚನೆ ಮಾಡಲಾಗಿದೆ.

ಇನ್ನು ಕೆಂಪು ಗುಲಾಬಿ, ವಿವಿಧ ಬಣ್ಣದ ಹೂ ಮಿಶ್ರಿತ ಅಂಬಾರಿ ಹೊತ್ತ ಆನೆ ಆಕರ್ಷಣೀಯವಾಗಿದ್ದು, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

18 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

18 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

19 hours ago