ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ವಿಶೇಷ ಉಡುಗೊರೆ ರೆಡಿಯಾಗಿದೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಇನ್ನು ಎರಡು ದಿನ ಮಾತ್ರ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಇದಕ್ಕಾಗಿ ಮೈಸೂರು ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗಿದೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಜಂಬೂಸವಾರಿ ರಿಹರ್ಸಲ್
ಇನ್ನು ಜಂಬೂಸವಾರಿ ದಿನದಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲು ವಿಶೇಷ ಉಡುಗೊರೆ ರೆಡಿಯಾಗಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಸಿದ್ದರಾಮೇಶ್ವರ ಪ್ರತಿಮೆ ಕಾಣಿಕೆ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೆಂಕೇರಮ್ಮ ಮೂರ್ತಿ ಪ್ರತಿಮೆ ಕಾಣಿಕೆ ನೀಡಲಾಗುತ್ತದೆ.
ಮೈಸೂರಿನ ಶಿಲ್ಪಿ ರಾಜೇಶ್ ಅವರು ಇವೆರಡು ಪ್ರತಿಮೆಗಳನ್ನು ಸಂಪೂರ್ಣ ಪಂಚ ಲೋಹದಿಂದ ಮಾಡಿದ್ದು, ಜಂಬೂಸವಾರಿ ದಿನದಂದು ನಂದಿ ಧ್ವಜ ಪೂಜೆ ಬಳಿಕ ಸಿಎಂ ಹಾಗೂ ಡಿಸಿಎಂಗೆ ಈ ಪ್ರತಿಮೆಗಳನ್ನು ನೀಡಲಿದ್ದಾರೆ.





