Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ನ್ನು ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರು ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು.

ವಿಶ್ವವಿಖ್ಯಾತ 415ನೇ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಲೇಖಕಿ ಬಾನು ಮುಷ್ತಾಕ್‌ ಅವರು ನೆರವೇರಿಸಿದರು. ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಕೆ. ವೆಂಕಟೇಶ್, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಾಸಕ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು.

ಪುಷ್ಪಾರ್ಚನೆ ಬಳಿಕ ಲೇಖಕಿ ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತದಿಂದ ಅಂಬಾರಿ ಆನೆಯ ಪ್ರತಿಕೃತಿ ನೀಡಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತವು ಉಳಿದವರಿಗೆ ತ್ರಿಪುರ ಸುಂದರದೇವಿ ಪ್ರತಿಕೃತಿ ನೀಡಿ ಸನ್ಮಾನಿಸಿತು.

ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಡಾ ಎಚ್ ಸಿ ಮಹದೇವಪ್ಪ, ಎಚ್ ಕೆ ಪಾಟೀಲ್, ಕೆ ವೆಂಕಟೇಶ್, ಶಿವರಾಜ್ ತಂಗಡಗಿ, ಕೆ ಎಚ್ ಮುನಿಯಪ್ಪ, ಶಾಸಕರುಗಳಾದ ಜಿ.ಟಿ ದೇವೇಗೌಡ, ತನ್ವಿರ್ ಸೇಠ್, ಅನಿಲ್ ಚಿಕ್ಕಮಾದು, ಟಿ ಎಸ್ ಶ್ರೀವತ್ಸ, ದರ್ಶನ್ ಧ್ರುವನಾರಾಯಣ್, ಕೆ ಹರೀಶ್ ಗೌಡ, ಡಿ ರವಿಶಂಕರ್, ರಮೇಶ್ ಬಂಡಿಸಿದ್ದೆಗೌಡ, ಎ ಆರ್ ಕೃಷ್ಣಮೂರ್ತಿ, ವಿಧಾನಪರಿಷತ್ ಸದಸ್ಯರಾದ ಡಾ ಡಿ ತಿಮ್ಮಯ್ಯ, ಕೆ ಶಿವಕುಮಾರ್, ಸಿ ಎನ್ ಮಂಜೇಗೌಡ, ಕೆ ವಿವೇಕಾನಂದ ಸೇರಿದಂತೆ ಹಲವರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೈರಾಗಿದ್ದರು.

 

Tags:
error: Content is protected !!