ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರು ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು.
ವಿಶ್ವವಿಖ್ಯಾತ 415ನೇ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಲೇಖಕಿ ಬಾನು ಮುಷ್ತಾಕ್ ಅವರು ನೆರವೇರಿಸಿದರು. ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಕೆ. ವೆಂಕಟೇಶ್, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಾಸಕ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು.
ಪುಷ್ಪಾರ್ಚನೆ ಬಳಿಕ ಲೇಖಕಿ ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತದಿಂದ ಅಂಬಾರಿ ಆನೆಯ ಪ್ರತಿಕೃತಿ ನೀಡಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತವು ಉಳಿದವರಿಗೆ ತ್ರಿಪುರ ಸುಂದರದೇವಿ ಪ್ರತಿಕೃತಿ ನೀಡಿ ಸನ್ಮಾನಿಸಿತು.
ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಡಾ ಎಚ್ ಸಿ ಮಹದೇವಪ್ಪ, ಎಚ್ ಕೆ ಪಾಟೀಲ್, ಕೆ ವೆಂಕಟೇಶ್, ಶಿವರಾಜ್ ತಂಗಡಗಿ, ಕೆ ಎಚ್ ಮುನಿಯಪ್ಪ, ಶಾಸಕರುಗಳಾದ ಜಿ.ಟಿ ದೇವೇಗೌಡ, ತನ್ವಿರ್ ಸೇಠ್, ಅನಿಲ್ ಚಿಕ್ಕಮಾದು, ಟಿ ಎಸ್ ಶ್ರೀವತ್ಸ, ದರ್ಶನ್ ಧ್ರುವನಾರಾಯಣ್, ಕೆ ಹರೀಶ್ ಗೌಡ, ಡಿ ರವಿಶಂಕರ್, ರಮೇಶ್ ಬಂಡಿಸಿದ್ದೆಗೌಡ, ಎ ಆರ್ ಕೃಷ್ಣಮೂರ್ತಿ, ವಿಧಾನಪರಿಷತ್ ಸದಸ್ಯರಾದ ಡಾ ಡಿ ತಿಮ್ಮಯ್ಯ, ಕೆ ಶಿವಕುಮಾರ್, ಸಿ ಎನ್ ಮಂಜೇಗೌಡ, ಕೆ ವಿವೇಕಾನಂದ ಸೇರಿದಂತೆ ಹಲವರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೈರಾಗಿದ್ದರು.
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…
ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…