ನಮ್ಮ ಮೈಸೂರ ದಸರಾ 2025

ಉದ್ಘಾಟನಾ ಕಾರ್ಯಕ್ರಮದಲ್ಲಿ ಲೇಖಕಿ ಬಾನು ಮುಷ್ತಾಕ್‌ ಭಾಷಣ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದ್ದು, ಉದ್ಘಾಟಕಿ ಬಾನು ಮುಷ್ತಾಕ್‌ ಅವರು ಭಾಷಣ ಹೀಗಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಾನು ಮುಷ್ತಾಕ್‌ ಅವರು, ಈ ದಿನ ದಸರಾ ಉತ್ಸವದ ಉದ್ಘಾಟನೆಯನ್ನು ತಾಯಿ ಚಾಮುಂಡೇಶ್ವರಿ ಕೃಪಾರ್ಶಿವಾದದಿಂದ ಉದ್ಘಾಟಿಸಿದ್ದೇನೆ.

ನನ್ನ ಗೆಳತಿಯೊಬ್ಬರು ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರುತ್ತೇನೆ ಎಂದು ಹರಕೆ ಹೊತ್ತಿದ್ದಳು. ಬರಲು ಸಾಧ್ಯವಾಗಿರಲಿಲ್ಲ. ಆದರೆ ರಾಜ್ಯ ಸರ್ಕಾರದ ಮೂಲಕ ನನ್ನನ್ನು ಚಾಮುಂಡೇಶ್ವರಿ ಕರೆಸಿಕೊಂಡಿದ್ದಾಳೆ. ಒಂದು ಚರಿತ್ರಿಕ ಸನ್ನಿವೇಶಗಳು ಉದ್ಭವವಾದರು ತಾಯಿ ಚಾಮುಂಡೇಶ್ವರಿ ಕರೆಸಿಕೊಂಡಿದ್ದಾಳೆ. ಸಾಂಸ್ಕೃತಿಕ ಉತ್ಸವ ಎಲ್ಲರನ್ನು ಸಮನ್ವಯಗೊಳಿಸುತ್ತದೆ. ಈ ಮಣ್ಣಿನಲ್ಲಿ ಹುಟ್ಟಿರುವ ಪ್ರತಿಯೊಬ್ಬರಿಗೂ ಪಾಲ್ಗೊಳ್ಳುವ ಅವಕಾಶ ಇದೆ. ಕನ್ನಡ ಭಾಷೆಯ ಹೃದಯದ ಸ್ಪಂದನೆಗೆ ಈ ಹಬ್ಬ ನೆನಪಿಸುತ್ತದೆ. ಏಕತೆಯ ಸುಗಂಧ ಈ ಹಬ್ಬದ ಪ್ರತೀಕವಾಗಿದೆ ಮೈಸೂರಿನ ಉರ್ದು ಭಾಷಿಕರು ದಸರಾ ಹಬ್ಬದ ಎಲ್ಲಾ ಹತ್ತು ದಿನಗಳಲ್ಲೂ ತಮ್ಮ ಗುರುತುಗಳನ್ನು ನೀಡಿದ್ದಾರೆ.

ಎಲ್ಲರನ್ನು ಒಳಗೊಂಡು ಆಚರಿಸುವ ಸಂಸ್ಕೃತಿ ಇದಾಗಿದೆ. ನನ್ನ ಮಾವ ಮೈಸೂರು ಮಹಾರಾಜರ ಅಂಗ ರಕ್ಷಕರಾಗಿದ್ದರು. ಅಂತಹ ಅನೇಕ ಮುಸ್ಲಿಂಮರು ಮಹಾರಾಜರಿಗೆ ಅಂಗರಕ್ಷಕರಾಗಿದ್ದರು. ಮಹಾರಾಜರು ಮುಸ್ಲಿಂರನ್ನು ನಂಬಿ ಅವರನ್ನು ಅಂಗರಕ್ಷಕರಾಗಿ ಇಟ್ಟು ಕೊಂಡಿದ್ದು ಬಹಳ ಖುಷಿ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸೋಣ. ಈ ದಸರಾ ಕೇವಲ ಮೈಸೂರಿಗೆ ಸೀಮಿತವಾಗದೆ ಇಡೀ ಜಗತ್ತಿನ ಮಾನವ ಕುಲಕ್ಕೆ ಶಾಂತಿ, ನ್ಯಾಯ, ಸಮಾನತೆಯ ದೀಪವಾಗಲಿ. ಈ ದಸರಾ ಆಚರಣೆ ಇಡೀ ಪ್ರಪಂಚಾದ್ಯಂತ ನೆಲೆ ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ.

ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು. ಮನುಷ್ಯ ಮಾತ್ರ ಗಡಿಗಳನ್ನು ಹಾಕಿಕೊಂಡಿರುತ್ತಾನೆ. ಪರಿಸರ ಎಂದಿಗೂ ಗಡಿ ಹಾಕಿಕೊಳ್ಳುವುದಿಲ್ಲ.. ಸ್ತ್ರೀ ಎಂದರೆ ಕೇವಲ ತಾಯಿ ಮಾತ್ರವಲ್ಲ ಅನ್ಯಾಯದ ವಿರುದ್ಧ ಹೊರಡುವ ಶಕ್ತಿಯು ಹೌದು. ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು. ಮನುಷ್ಯ ಮಾತ್ರ ಗಡಿಗಳನ್ನು ಹಾಕಿಕೊಂಡಿರುತ್ತಾನೆ. ಪರಿಸರ ಎಂದಿಗೂ ಗಡಿ ಹಾಕಿಕೊಳ್ಳುವುದಿಲ್ಲ.. ನಾನು ನೂರಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಂಗಳಾರತಿಯನ್ನು ತೆಗೆದುಕೊಂಡಿದ್ದೇನೆ. ಎಷ್ಟೇ ಸವಾಲುಗಳು ಬಂದರು ದಿಟ್ಟವಾಗಿ ನಿಂತು ನೈತಿಕ ಬೆಂಬಲ ನೀಡಿದ ಸಿಎಂ ಸಿದ್ದರಾಮಯ್ಯ ಅವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಭಾಷಣ ಮುಗಿಸಿದರು.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago