dasara programme
ಮೈಸೂರು : ದಸರಾ ರಂಗು ಹೆಚ್ಚಿಸುತ್ತಿರುವ ಯುವ ಸಂಭ್ರಮದಲ್ಲಿ ಶಿವತಾಂಡವ ಕುರಿತ ನೃತ್ಯ ರೂಪಕ ಗಮನ ಸೆಳೆಯಿತು.
ಸಾಂಸ್ಕೃತಿಕ ವೈಭವ, ಜಾನಪದ ಸಂಸ್ಕೃತಿ, ಶಿಕ್ಷಣದ ಮಹತ್ವ ಸಾರಿ ಹೇಳುವ ನೃತ್ಯ ರೂಪಕಗಳು ಮಾನಸಗಂಗೋತ್ರಿಯ ಬಯಲು ರಂಗಮಂದಿರವನ್ನು ಆವರಿಸಿ ನೋಡುಗರನ್ನು ವಿಸ್ಮಿತರನ್ನಾಗಿಸಿದವು.
ಮೈಸೂರು ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಾಹಿತ್ಯ ಪ್ರಕಾರದ ನೃತ್ಯ, ಕೊಳ್ಳೇಗಾಲ ವಿದ್ಯಾನಗರ ಜೆ.ಎಸ್.ಎಸ್ ಶುಶ್ರೂಷ್ ಶಾಲೆ ಜಾನಪದ ನೃತ್ಯ, ಮೈಸೂರು ಸರಸ್ವತಿ ಪುರಂ ಜೆ ಎಸ್ ಎಸ್ ಮಹಿಳಾ ಐ ಟಿಐ ಡಿ ಎಲ್ ಡಿ ಕಾಲೇಜಿನ ವಿದ್ಯಾರ್ಥಿಗಳು ಶಿವತಾಂಡವ ನೃತ್ಯಗಳು ಯುವಕರ ಶಿಳ್ಳೆ ಚಪ್ಪಾಳೆಯ ಝೇಂಕಾರ ಮಾಡಿದವು.
ಇಂದು ನಡೆದ ಕಾರ್ಯಕ್ರಮದಲ್ಲಿ 53 ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ದೇಶಭಕ್ತಿ ಸ್ವಾತಂತ್ಯ ಚಳುವಳಿ, ಯುವಜನತೆಯ ರೈತರು & ಯೋಧರು, ಆದಿಶಕ್ತಿ, ವೀರವನತಿಯರ ಕುರಿತು, ಮತದಾನ ಮತ್ತು ಪ್ರಜಾಪ್ರಭುತ್ವ, ಕನ್ನಡ ಸಂಸ್ಕೃತಿ, ಭಾರತೀಯ ಸೈನ್ಯದಲ್ಲಿ ಮಹಿಳಾಯೋಧರು ಹೀಗೆ ಮಂಡ್ಯ, ಮೈಸೂರು, ವಿಜಯಪುರ, ಮದ್ದೂರು, ಬೆಂಗಳೂರು, ಹುಣಸೂರು ನಾನಾ ಕಡೆಯ ಕಾಲೇಜಿನ ವಿದ್ಯಾರ್ಥಿಗಳು ಈ ರೀತಿಯ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…