ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮೈಸೂರು ಜಿಲ್ಲಾಡಳಿತದಿಂದ ಸಿದ್ಧತೆ

(ಸಾಂದರ್ಭಿಕ ಚಿತ್ರ)

ಮೈಸೂರು: ನಾಳೆ (ಜು.19) ಮತ್ತು ಜು.21 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಜಿಲ್ಲೆಯಲ್ಲಿ ಒಟ್ಟು 237 ಪರೀಕ್ಷಾ ಕೇಂದ್ರಗಳಿದ್ದು, 38,989 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಬಳಿ 144 ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ರೆಗ್ಯುಲರ್ 37.474, ಖಾಸಗಿ -1081, ವಿಶೇಷ ಮಕ್ಕಳು-434 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲಿದ್ದಾರೆ. ಒಂದೊಂದು ಕೊಠಡಿಗೆ 12 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದೆ.

ಪರೀಕ್ಷಾ ಪ್ರಕ್ರಿಯೆಗೆ 3500 ಸಿಬ್ಬಂದಿ ನಿಯೋಜಿಸಲಾಗಿದೆ. ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು, ಕೆಫೆ, ಕಂಪ್ಯೂಟರ್ ಕೇಂದ್ರಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು ವಾಹನಗಳನ್ನು ಪಾರ್ಕಿಂಗ್‌ಗೂ ನಿಷೇಧಿಸಲಾಗಿದೆ.

× Chat with us