ಅ.19 ರಂದು ಚಾಮುಂಡಿ ರಥೋತ್ಸವ; ಪ್ರವೇಶ ನಿರ್ಬಂಧ

ಮೈಸೂರು:ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವವು ಅ. 19ರಂದು ಬೆಳಿಗ್ಗೆ 7.18ರಿಂದ 7.40ರ ವರೆಗೆ ಸಾಂಪ್ರದಾಯಿಕವಾಗಿ ಮತ್ತು ಸರಳವಾಗಿ ನಡೆಯಲಿದ್ದು, ಅಂದು ಬೆಳಿಗ್ಗೆ 4ರಿಂದ 10 ಗಂಟೆಯವರೆಗೆ ಸಾರ್ವಜನಿಕರಿಗೆ ಮತ್ತು ವಾಹನಗಳಿಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶಿಸಿದ್ದಾರೆ.

ರಥೋತ್ಸವ ಸರಳವಾದ್ದರಿಂದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೇವಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡುವರು. ನಂತರ ದೇವಸ್ಥಾನದ ಸುತ್ತ ಪ್ರಭಾವಳೀ ನಡೆಸಿ, ಬಳಿಕ ಸರ್ಕಾರಿ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವರು.

× Chat with us