ಎಚ್‌.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆಯಾದ ಕೃಷ್ಣನಾಯಕ

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೆ.ಎಂ.ಕೃಷ್ಣನಾಯಕ ಜೆಡಿಎಸ್‌ ಸೇರ್ಪಡೆಯಾದರು.

ಬಿಡದಿ ತೋಟದಲ್ಲಿರುವ ಜೆಡಿಎಸ್‌ ಕಚೇರಿಯಲ್ಲಿ ತಮ್ಮ ನೂರಾರು ಬೆಂಬಲಿಗರೊಂದಿಗೆ ಜೆಡಿಎಸ್‌ಗೆ ಸೇರಿದ ಕೃಷ್ಣನಾಯಕ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಇವರೊಂದಿಗೆ ಹುಣಸೂರು, ಎಚ್.ಡಿ.ಕೋಟೆ ಕ್ಷೇತ್ರದ ಹಲವಾರು ಪ್ರಮುಖರು ಕಾಂಗ್ರೆಸ್, ಬಿಜೆಪಿ ತೊರೆದು ಜೆಡಿಎಸ್‌ ಸೇರಿದರು.

ಕಳೆದ ಮೂರು ವರ್ಷಗಳಿಂದ ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿರುವ ಕೆ.ಎಂ.ಕೃಷ್ಣನಾಯಕ ಅವರು ಜೆಡಿಎಸ್‌ ಸೇರುವ ಮುನ್ನವೇ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದರು. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿರುವ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಜೆಡಿಎಸ್‌ನಿಂದ ಮತ್ತೊಮ್ಮೆ ಕಣಕ್ಕಿಳಿಯಲು ಬಯಸಿದ್ದರೂ ಕೂಡ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕೃಷ್ಣನಾಯಕರಿಗೆ ಟಿಕೆಟ್ ಕೊಡುವ ಸಾಧ್ಯತೆ ಇದೆ. ಹೀಗಾಗಿಯೇ, ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

× Chat with us