ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ: ತುರ್ತಾಗಿ ಕ್ರಮ ಕೈಗೊಳ್ಳಲು ಸಚಿವರಿಗೆ ಶಾಸಕ ಜಿಟಿಡಿ ಮನವಿ

ಮೈಸೂರು: ಚಾಮುಂಡಿ ಬೆಟ್ಟದ ನಂದಿ ಮೂಲಕ ಹೋಗುವ ರಸ್ತೆಯಲ್ಲಿ ಭೂಕುಸಿತ ಉಂಟಾಗಿರುವ ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಸ್ತೆಗೆ ಹಾನಿಗೀಡಾಗಿರುವುದರಿಂದ ಕೂಡಲೇ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಹಾಗೂ ಆರ್.ಸಿ.ಸಿ. ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ಕೂಡಲೇ ಅಂದಾಜು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ಎರಡು ವರ್ಷಗಳ ಹಿಂದೆಯೂ ಇದೆ ರೀತಿ ಭೂಕುಸಿತ ಚಾಮುಂಡಿಬೆಟ್ಟದ ರಸ್ತೆಯಲ್ಲಿ ಸಂಭವಿಸಿತ್ತು, ಆದ್ದರಿಂದ ಬೆಟ್ಟದಲ್ಲಿ ಈ ರೀತಿಯ ಭೂಕುಸಿತ ಸಂಭವಿಸದಂತೆ ಕ್ರಮ ಕೈಗೊಳ್ಳಲು ತಾಂತ್ರಿಕ ವರದಿಯನ್ನು ತಯಾರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಅಭಿವೃದ್ಧಿ ಗೆ ಮತ್ತು ಆರ್.ಸಿ.ಸಿ. ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಸಚಿವರು, ಉಸ್ತುವಾರಿ ಸಚಿವರಲ್ಲಿ ಹಾಗೂ ಲೋಕೋಪಯೋಗಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಕೃಷ್ಣರೆಡ್ಡಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಹರ್ಷ, ಎಇಇ ರಾಜು ಹಾಜರಿದ್ದರು.

× Chat with us