ನಂಜನಗೂಡು: ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದ ಪಿಡಿಒ ಆಸ್ಪತ್ರೆಯಲ್ಲಿ ಸಾವು!

ನಂಜನಗೂಡು: ತಾಲ್ಲೂಕಿನ ಸುತ್ತೂರಿನ ಮಹಿಳಾ ಪಿಡಿಒವೊಬ್ಬರು ಕಚೇರಿಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಿಡಿಒ ಸಾವಿತ್ರಮ್ಮ (44) ಮೃತ ಅಧಿಕಾರಿ.

ಸೆ. 23ರಂದು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪಿಡಿಒ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೇ ಶುಕ್ರವಾರ ಅವರು ಮೃತಪಟ್ಟಿದ್ದಾರೆ.

ನಂಜನಗೂಡಿನ ಹುಲ್ಲಹಳ್ಳಿ ಮತ್ತು ಸುತ್ತೂರು ಗ್ರಾಮಗಳಲ್ಲಿ 6 ವರ್ಷಗಳಿಂದ ಅಭಿವೃದ್ಧಿ ಅಧಿಕಾರಿಯಾಗಿ ಸಾವಿತ್ರಮ್ಮ ಕಾರ್ಯನಿರ್ವಹಿಸುತ್ತಿದ್ದರು. ಸುತ್ತೂರು ಗ್ರಾಪಂನಲ್ಲಿ ಜನಪ್ರತಿನಿಧಿಯೊಬ್ಬರು ಸಾವಿತ್ರಮ್ಮಗೆ ಧಮ್ಕಿ ಹಾಕಿದಾಗ ಕುಸಿದು ಬಿದ್ದಿದ್ದಾರೆಂದು ಹೇಳಲಾಗಿದೆ. ಈ ಸಂಭಂಧ ಯಾವುದೇ ದೂರು ದಾಖಲಾಗಿಲ್ಲ.

× Chat with us