ಮೈಸೂರು| ಮದುವೆಗೆ ಬಟ್ಟೆ ಖರೀದಿಸಲು ಹೋಗುತ್ತಿದ್ದಾಗ ಅಪಘಾತ: ಮಗು ಸೇರಿ 3 ಸಾವು!

ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಗೂಡ್ಸ್‌ ಆಟೋ ನಡುವೆ ಅಪಘಾತ ಸಂಭವಿಸಿ, ದಸರಾ ದೀಪಾಲಂಕಾರ ನೋಡಲು ಬರುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಭಾನುವಾರ ನಡೆದಿದೆ.

ಇಮ್ರಾನ್ ಪಾಷಾ (30), ಯಾಸ್ಮಿನ್ (28), ಅಫ್ನಾನ್ (2) ಮೃತಪಟ್ಟವರು. ಇಮ್ರಾನ್‌ಗೆ ಮದುವೆ ನಿಶ್ಚಯವಾಗಿತ್ತು. ನಗರದಲ್ಲಿ ಬಟ್ಟೆ ಖರೀದಿಸಿ, ದೀಪಾಲಂಕಾರ ನೋಡಿಕೊಂಡು ಹೋಗೋಣ ಎಂದು ಆಗಮಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ವರಕೋಡು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಗೂಡ್ಸ್‌ ಆಟೋದಲ್ಲಿದ್ದ ಇನ್ನೂ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೂಡ್ಸ್‌ ಆಟೋದಲ್ಲಿದ್ದವರು ತಿ.ನರಸೀಪುರದಿಂದ ಮೈಸೂರಿಗೆ ಲೈಟಿಂಗ್ಸ್ ನೋಡಲು ಬರುತ್ತಿದ್ದರು. ಈ ವೇಳೆ ಮೈಸೂರಿನಿಂದ ನರಸೀಪುರದ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಆಟೋ ಡಿಕ್ಕಿ ಹೊಡೆದಿದೆ.

× Chat with us