ಕೆ-ಸೆಟ್‌: ಜುಲೈ 25ರಂದು ಪರೀಕ್ಷೆ

ಮೈಸೂರು: ಕೋವಿಡ್‌ ಕಾರಣದಿಂದಾಗಿ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ದಿನಾಂಕವನ್ನು ಮರುನಿಗದಿ ಮಾಡಲಾಗಿದ್ದು, ಜುಲೈ 25ರಂದು ಪರೀಕ್ಷೆ ನಡೆಯಲಿದೆ.

ಈ ಮೊದಲು ಏಪ್ರಿಲ್ 11ರಂದು ಕೆ-ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಲಾಕ್‌ಡೌನ್‌ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶ ಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿವಿ ಪ್ರಕಟಣೆ ಹೊರಡಿಸಿದೆ.

ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್​ಸೈಟನ್ನು ಸಂಪರ್ಕಿಸಬಹುದು http://kset.uni-mysore.ac.in/