ಟೆಹ್ರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಪರಿಣಾಮ ಹೊರ್ಮುಜ್ ಜಲಸಂಧಿಯ ನಿಯಂತ್ರಣವನ್ನು ಮುಂದುವರಿಸುವುದಾಗಿ ಇರಾನ್ ಘೋಷಿಸಿದೆ.
ಇತ್ತೀಚೆಗೆ ಇರಾನ್‌ನ ಒಂದು ಹಡಗನ್ನು ಅಮೆರಿಕದ ಪಡೆಗಳು ವಶಪಡಿಸಿಕೊಂಡಿರುವುದು ಈ ಬೆಳವಣಿಗೆಗೆ ಕಾರಣವಾಗಿದೆ ಎನ್ನಲಾಗಿದೆ. ಇದರಿಂದಾಗಿ ಜಲಸಂಧಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುವ ಸನ್ನಿವೇಶ ಸೃಷ್ಟಿವಾಗಿದೆ.
ಇರಾನ್ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಮಾತನಾಡಿ, “ಅಮೆರಿಕದೊಂದಿಗೆ ಯಾವುದೇ ಮಾತುಕತೆಗೆ ಪ್ರಸ್ತುತ ಸಮಯ ಸಕಾಲವಲ್ಲ. ಅಮೆರಿಕದ ಕ್ರಮಕ್ಕೆ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಹೊರ್ಮುಜ್ ಜಲಸಂಧಿ ಮೇಲಿನ ತನ್ನ ಹಿಡಿತ ಬಿಗಿಗೊಳಿಸಿರುವುದಾಗಿ ಇರಾನ್ ಸ್ಪಷ್ಟವಾಗಿ ಹೇಳಿದೆ.
ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ಇರಾನ್ ಜತೆಗೆ ಎರಡನೇ ಸುತ್ತಿನ ಮಾತುಕತೆ ನಡೆಯುವುದನ್ನು ಭಾನುವಾರ ಖಚಿತಪಡಿಸಿದ್ದರು. ಉಪಾಧ್ಯಾಕ್ಷ ಜೆ.ಡಿ.ವ್ಯಾನ್ಸ್ ನೇತೃತ್ವದ ನಿಯೋಗ ಪಾಕಿಸ್ತಾನಕ್ಕೆ ತೆರಳಲಿದೆ ಎಂದಿದ್ದರು.
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…