ದೇಶ- ವಿದೇಶ

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರಂತರ ಸಭೆಗಳನ್ನು ನಡೆಸಿದ ಬಳಿಕ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ಕುತೂಹಲ ಮತ್ತು ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ 102 ಸ್ಥಾನಗಳೊಂದಿಗೆ ಭರ್ಜರಿ ಬಹುಮತ ಪಡೆದಿದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡಿರಲಿಲ್ಲ. ಸಿಎಂ ಗಾದಿಗಾಗಿ ಪಕ್ಷದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌, ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್‌ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮ ನಿರ್ಧಾರ ಕೈಗೊಳ್ಳಲು ಭಾರೀ ಕಸರತ್ತು ನಡೆಸಿದ ಹೈಕಮಾಂಡ್‌ ಕೇರಳದ ಕೈ ನಾಯಕರ ಮಾತಿಗೆ ಬೆಲೆ ನೀಡಿ ವಿ.ಡಿ. ಸತೀಶನ್ ಅವರನ್ನೇ ಅಂತಿಮಗೊಳಿಸಿದೆ.

ಯುಡಿಎಫ್ ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ವಿ.ಡಿ. ಸತೀಶನ್ ಅವರ ಆಯ್ಕೆಗೆ ಪ್ರಬಲ ಬೆಂಬಲ ವ್ಯಕ್ತಪಡಿಸಿತ್ತು.

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆಸಿ ವೇಣುಗೋಪಾಲ್‌ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಶಾಸಕರ ಬೆಂಬಲ ಹಾಗೂ ಹೈಕಮಾಂಡ್ ಒಲವು ಇವರ ಪರ ಹೆಚ್ಚಾಗಿತ್ತು.

ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಎಲ್‌ಡಿಎಫ್ ಸರ್ಕಾರದ ವಿರುದ್ಧ ಮುಂಚೂಣಿಯಲ್ಲಿ ಹೋರಾಡಿದ್ದ ವಿ.ಡಿ. ಸತೀಶನ್ ತನಗೆ ಸಿಎಂ ಪಟ್ಟ ನೀಡದಿದ್ದರೆ ಬೇರೆ ಯಾವುದೇ ಸಚಿವ ಸ್ಥಾನ ಬೇಡ ಎಂಬ ಬಿಗಿ ನಿಲುವನ್ನು ತಳೆದಿದ್ದರು.ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಇವರೂ ಸಹ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಶಾಸಕರ ಬೆಂಬಲ ವಿ.ಡಿ. ಸತೀಶನ್ ಮತ್ತು ಕೆಸಿ ವೇಣುಗೋಪಾಲ್‌ ಅವರಿಗೆ ಇದ್ದ ಕಾರಣ ಸಿಎಂ ರೇಸ್‌ನಲ್ಲಿ ಇವರು ಹಿಂದೆ ಸರಿದಿದ್ದರು.

ಮೂವರಲ್ಲಿ ಯಾರನ್ನೇ ಒಬ್ಬರನ್ನು ಆಯ್ಕೆ ಮಾಡಿದರೂ ಪಕ್ಷದಲ್ಲಿ ಬಣ ರಾಜಕೀಯ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಸರ್ವಸಮ್ಮತ ಸೂತ್ರಕ್ಕಾಗಿ ಹೈಕಮಾಂಡ್ ಹೆಣಗಾಟ ನಡೆಸಿತ್ತು. ಇದೀಗ ಅಂತಿಮವಾಗಿ ವಿ.ಡಿ.ಸತೀಶನ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

32 mins ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

1 hour ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

2 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

2 hours ago

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

2 hours ago

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

2 hours ago