ದೇಶ- ವಿದೇಶ

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಂವಾದದಲ್ಲಿ ಯುವಕರು ತಮ್ಮ ಪ್ರವಾಸದ ಅನುಭವಗಳನ್ನು ಪ್ರಧಾನಿಯೊಂದಿಗೆ ಹಂಚಿಕೊಂಡರು.

ಪ್ರವಾಸದ ವೇಳೆ ವಿವಿಧ ಪ್ರದೇಶಗಳ ಜನರನ್ನು ಭೇಟಿಯಾಗಿ, ಅವರ ಸಮಸ್ಯೆಗಳು ಹಾಗೂ ಅನುಭವಗಳನ್ನು ಆಲಿಸಿರುವುದಾಗಿ ಯುವಕರು ತಿಳಿಸಿದರು.

ಜನರೊಂದಿಗೆ ನೇರವಾಗಿ ಸಂಪರ್ಕ ಸಾಧಿಸುವುದುವಿಶೇಷ ಹಾಗೂ ಅದ್ಭುತ ಅನುಭವವಾಗಿದೆ ಎಂದು ಸಂವಾದದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಪ್ರಯಾಣದ ವೇಳೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ವೃದ್ಧೆಯೊಬ್ಬರನ್ನು ಯುವಕರು ಭೇಟಿಯಾಗಿದ್ದರು.

ತಾವು ವಡನಗರಕ್ಕೆ ತೆರಳಿ ಫಲಾನುಭವಿಗಳನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆಯುತ್ತಿರುವುದಾಗಿ ಯುವಕರು ವೃದ್ಧೆಗೆ ತಿಳಿಸಿದ್ದರು. ಈ ವೇಳೆ ವೃದ್ಧೆ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸುವಂತೆ ಯುವಕರಿಗೆ ಮನವಿ ಮಾಡಿದ್ದರು. ಈ ಅನುಭವವನ್ನೂ ಯುವಕರು ಪ್ರಧಾನಿಯೊಂದಿಗೆ ಹಂಚಿಕೊಂಡರು.

ಜನರನ್ನು ಭೇಟಿಯಾಗಿ, ಅವರ ಅನುಭವಗಳನ್ನು ಆಲಿಸಿ, ಸೇವೆಯ ಮನೋಭಾವದೊಂದಿಗೆ ಸಾಗುತ್ತಿರುವ ಸೇವಾ ಸಂಕಲ್ಪ ಯಾತ್ರೆಯ ಅನುಭವಗಳನ್ನು ಯುವಕರು ಪ್ರಧಾನಿಯೊಂದಿಗೆ ಹಂಚಿಕೊಂಡರು.

ಆಂದೋಲನ ಡೆಸ್ಕ್

Recent Posts

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

20 mins ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

29 mins ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

4 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

10 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

10 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

10 hours ago